ಕರ್ನಾಟಕ

karnataka

ETV Bharat / state

ಶಿಕ್ಷಣ ಸಂಸ್ಥೆಗಳನ್ನು ವಿಶ್ವಾಸಕ್ಕೆ ಪಡೆದು ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಗೊಳಿಸಿ : ಸಿಎಂ ಬಿಎಸ್‌ಬಿ ಸಲಹೆ - Progress Review Meeting of Higher Education Department

ಈ ಬಗ್ಗೆ ಈಗಾಗಲೇ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ದೇಶದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಗೊಳಿಸುತ್ತಿರುವ ಮೊದಲ ರಾಜ್ಯ ಕರ್ನಾಟಕ. ಆದ್ದರಿಂದ ಶಿಕ್ಷಣ ನೀತಿ ಅನುಷ್ಠಾನದ ಕುರಿತಂತೆ ರಾಜ್ಯಾದ್ಯಂತ ಪ್ರಮುಖ ಶಿಕ್ಷಣ ಸಂಸ್ಥೆಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪ್ರಾಯೋಗಿಕವಾಗಿ ಕಾರ್ಯಕ್ರಮ ಜಾರಿಗೊಳಿಸುವಂತೆ ಸಿಎಂ ಸಲಹೆ ನೀಡಿದರು..

implementation-of-national-education-policy
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

By

Published : Aug 17, 2021, 7:58 PM IST

ಬೆಂಗಳೂರು :ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ ಕುರಿತಂತೆ ರಾಜ್ಯದಾದ್ಯಂತ ಪ್ರಮುಖ ಶಿಕ್ಷಣ ಸಂಸ್ಥೆಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪ್ರಾಯೋಗಿಕವಾಗಿ ಕಾರ್ಯಕ್ರಮ ಜಾರಿಗೊಳಿಸುವಂತೆ ಉನ್ನತ ಶಿಕ್ಷಣ ಇಲಾಖೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಲಹೆ ನೀಡಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಉನ್ನತ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಲಾಯಿತು. ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನದ ಕುರಿತು ವಿಸ್ತೃತವಾಗಿ ಚರ್ಚೆ ನಡೆಸಲಾಯಿತು.

ಈ ಬಗ್ಗೆ ಈಗಾಗಲೇ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ದೇಶದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಗೊಳಿಸುತ್ತಿರುವ ಮೊದಲ ರಾಜ್ಯ ಕರ್ನಾಟಕ. ಆದ್ದರಿಂದ ಶಿಕ್ಷಣ ನೀತಿ ಅನುಷ್ಠಾನದ ಕುರಿತಂತೆ ರಾಜ್ಯಾದ್ಯಂತ ಪ್ರಮುಖ ಶಿಕ್ಷಣ ಸಂಸ್ಥೆಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪ್ರಾಯೋಗಿಕವಾಗಿ ಕಾರ್ಯಕ್ರಮ ಜಾರಿಗೊಳಿಸುವಂತೆ ಸಿಎಂ ಸಲಹೆ ನೀಡಿದರು.

ಈ ನೀತಿ ಜಾರಿಗೆ ಕರ್ನಾಟಕ ರಾಜ್ಯ ಶಿಕ್ಷಣ ಆಯೋಗ ಮತ್ತು ಇತರ ಸಾಂಸ್ಥಿಕ ವ್ಯವಸ್ಥೆಯನ್ನು ಸ್ಥಾಪಿಸುವ ಕುರಿತು ರೂಪರೇಷೆಗಳನ್ನು ಸಿದ್ಧಪಡಿಸುವಂತೆ ಸೂಚಿಸಲಾಯಿತು. ಖಾಸಗಿಯವರ ಸಹಯೋಗ ಪಡೆದುಕೊಳ್ಳಲೂ ಸಹ ಸಲಹೆ ನೀಡಲಾಯಿತು.

ರಾಜ್ಯದ ಜಿಇಆರ್ (Gross Enrollment Ratio) ಶೇ.32ರಷ್ಟಿದ್ದು, ಮುಂದಿನ ದಿನಗಳಲ್ಲಿ ಇದನ್ನು ಶೇ. 50ಕ್ಕೆ ಹೆಚ್ಚಿಸುವ ಗುರಿ ಹೊಂದಲಾಗಿದೆ. ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ಪೂರಕವಾಗಿ ಬಿಎಡ್, ಡಿಎಡ್ ಪಠ್ಯ ವಿಷಯವನ್ನು ಇನ್ನಷ್ಟು ಪರಿಣಾಮಕಾರಿಯಾಗುವಂತೆ ಪರಿಷ್ಕರಿಸಲು ಮುಖ್ಯಮಂತ್ರಿಗಳು ಸೂಚಿಸಿದರು. ಇದೇ ಸಂದರ್ಭದಲ್ಲಿ ಯುವಕರು ಉದ್ಯೋಗ ಪಡೆದುಕೊಳ್ಳಲು ಅನುವಾಗುವಂತೆ ಜಿಲ್ಲೆಗೊಂದು ತಾಂತ್ರಿಕ ಶಿಕ್ಷಣ ಶಾಲೆ ಪ್ರಾರಂಭಿಸುವಂತೆ ಮುಖ್ಯಮಂತ್ರಿಗಳು ಸಲಹೆ ನೀಡಿದರು.

ABOUT THE AUTHOR

...view details