ಬೆಂಗಳೂರು:ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್‌ನಲ್ಲಿ ಹಲವು ವೈಯಕ್ತಿಕ ಖಾತೆಗಳನ್ನು ನಿರ್ಬಂಧಿಸಿದ್ದ ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವಾಲಯದ ಕ್ರಮ ಪ್ರಶ್ನಿಸಿದ್ದ ಅರ್ಜಿಗೆ 50 ಲಕ್ಷ ರೂಪಾಯಿ ದಂಡ ವಿಧಿಸಿ ಹೈಕೋರ್ಟ್ ಆದೇಶಿಸಿತ್ತು. ಅವಮಾನಿಸುವ ಮತ್ತು ಟೀಕಿಸುವ ಉದ್ದೇಶವಿಲ್ಲದೆ ಜಾತಿ ಹೆಸರನ್ನು ಪ್ರಸ್ತಾಪಿಸಿ ನಿಂದಿಸಿದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ನಿಯಂತ್ರಣ ಕಾಯ್ದೆಯ ಅಡಿಯಲ್ಲಿ ಅಪರಾಧವಾಗುವುದಿಲ್ಲ ಎಂದು ತೀರ್ಪು ನೀಡಿತ್ತು.
ಆಮ್ ಆದ್ಮಿ ಪಕ್ಷಕ್ಕೆ ರಾಷ್ಟ್ರೀಯ ಪಕ್ಷದ ಸ್ಥಾನಮಾನ ನೀಡುವ ಮನವಿ ಪರಿಗಣಿಸುವಂತೆ ಹೈಕೋರ್ಟ್ ಕೇಂದ್ರ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿತ್ತು. ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ನೇತೃತ್ವದ ಏಕಸದಸ್ಯ ಪೀಠ ಸೋಮವಾರ ಒಂದೇ ದಿನ 522 ಪ್ರಕರಣಗಳನ್ನು ವಿಚಾರಣೆ ನಡೆಸಿ ದಾಖಲೆ ಬರೆದಿದೆ. ವಿಧಾನಸಭೆ ಚುನಾವಣೆ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ರ‍್ಯಾಲಿಗೆ ಅವಕಾಶ ನೀಡಿತ್ತು.
ಬಾಡಿಗೆ ತಾಯ್ತನ (ನಿಯಂತ್ರಣ) ಕಾಯಿದೆ 2021ರ ಅಡಿ ಮಕ್ಕಳಿಲ್ಲದ ದಂಪತಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಅನುವಂಶಿಕ (ಜೆನೆಟಿಕ್), ದೈಹಿಕ ಮತ್ತು ಆರ್ಥಿಕ ಸ್ಥಿತಿಗಳಗಳ ಕುರಿತು ಪರೀಕ್ಷೆಗೊಳಪಡಿಸಿ ಮುಂದಿನ ಕ್ರಮಕ್ಕೆ ಮುಂದಾಗಲು ನಿರ್ದೇಶನ ನೀಡಿತ್ತು. ದೃಷ್ಟಿ ವಿಶೇಷ ಚೇತನರೂ ಸೇರಿದಂತೆ ದಿವ್ಯಾಂಗರಿಗೆ ನೆರವಾಗಲು ಬಸ್ಗಳಲ್ಲಿ ಆಡಿಯೋ ರೂಪದಲ್ಲಿ ಪ್ರಕಟಣಾ ವ್ಯವಸ್ಥೆ ಅಳವಡಿಸುವಂತೆ ಖಾಸಗಿ ಬಸ್ ಆಪರೇಟರ್ಗಳಿಗೆ ನಿರ್ದೇಶನ ನೀಡಲು ಈಗಾಗಲೇ ಸೂಚನೆ ನೀಡಿದೆ.
ಆಸ್ತಿ ಖಾತೆ ಕೋರಿ ಸಲ್ಲಿಸಿರುವ ಅರ್ಜಿಗಳ ಸ್ವೀಕೃತಿ ಮತ್ತು ಅವುಗಳ ಸ್ಥಿತಿಗತಿಗೆ ಸಂಬಂಧಿಸಿದ ಮಾಹಿತಿಯನ್ನು ಸಂಬಂಧಿತ ನಗರ ಸಭೆಗಳು ಆನ್ಲೈನ್ನಲ್ಲಿ (ವೆಬ್ ಹೋಸ್ಟಿಂಗ್) ದಾಖಲಿಸಲು ಸೂಚಿಸಿತ್ತು. ರಾಜ್ಯದಲ್ಲಿ 13,352 ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಮುಂದುವರಿಸಲು ಸರ್ಕಾರಕ್ಕೆ ಸಮ್ಮತಿಸಿತ್ತು. ಕೋಳಿ ಸಾಕಾಣಿಕೆ ಮಾಡುವುದು ಕೃಷಿ ಚಟುವಟಿಕೆಯಾಗಿದೆ. ಇದಕ್ಕೆ ವಾಣಿಜ್ಯ ಚಟುವಟಿಕೆ ಆಧಾರದಲ್ಲಿ ತೆರಿಗೆ ವಿಧಿಸಲು ಗ್ರಾಮ ಪಂಚಾಯತಿಗೆ ಅಧಿಕಾರವಿಲ್ಲ ಎಂದು ಆದೇಶಿಸಿತ್ತು.
ಆರ್ಥಿಕವಾಗಿ ದುರ್ಬಲರಿಗೆ ಸಂವಿಧಾನ ಮತ್ತು ಚುನಾವಣಾ ಆಯೋಗದ ನಿಯಮಗಳು ಹಾಗೂ ಮಾರ್ಗಸೂಚಿಗಳ ಪ್ರಕಾರ ಗ್ಯಾರಂಟಿ ಘೋಷಣೆ ಮಾಡಿರುವುದಾಗಿ ಹೈಕೋರ್ಟ್‌ಗೆ ಸಿ.ಎಂ.ಸಿದ್ದರಾಮಯ್ಯ ತಿಳಿಸಿದ್ದರು. ಮಾಹಿತಿ ತಂತ್ರಜ್ಞಾನ ಕಾಯಿದೆಯ ಸೆಕ್ಷನ್ 69 ‘ಎ’ ಅಡಿ ಕೇಂದ್ರ ಮಾಹಿತಿ ತಂತ್ರಜ್ಞಾನ ಇಲಾಖೆ ಕೆಲವು ಖಾತೆಗಳಿಗೆ ನಿರ್ಬಂಧ ವಿಧಿಸಲು ಹೊರಡಿಸಿದ್ದ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದ ಎಕ್ಸ್ ಕಾರ್ಪ್(ಹಿಂದಿನ ಟ್ವಿಟರ್) 25 ಲಕ್ಷ ರೂ. ಠೇವಣಿ ಹೂಡಿತ್ತು.