ಬೆಂಗಳೂರು: ಕೇಂದ್ರದ ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಜೈಪಾಲ್ ರೆಡ್ಡಿ ಅವರ ನಿಧನಕ್ಕೆ ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಮತ್ತು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.
ಹಿರಿಯ ನಾಯಕ ಜೈಪಾಲ್ ರೆಡ್ಡಿ ನಿಧನಕ್ಕೆ ಗಣ್ಯರ ಸಂತಾಪ - ಕಾಂಗ್ರೆಸ್ ಹಿರಿಯ ನಾಯಕರಾದ ಜೈಪಾಲ್ ರೆಡ್ಡಿ
ಕೇಂದ್ರದ ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಜೈಪಾಲ್ ರೆಡ್ಡಿ ಅವರ ನಿಧನಕ್ಕೆ ಕಾಂಗ್ರೆಸ್ ಮುಖಂಡ ಡಿ.ಕೆ. ಶಿವಕುಮಾರ್ ಮತ್ತು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ, ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.

ಕಾಂಗ್ರೆಸ್ ಕಾರ್ಯಕರ್ತರಾಗಿ ಪಕ್ಷ ಸೇವೆ ಆರಂಭಿಸಿದ್ದ ಜೈಪಾಲ್ ರೆಡ್ಡಿ ಅವರು ಸಂಘಟನೆಯಲ್ಲಿ ಚತುರತೆ ಮೆರೆದವರು. ಅವರು ರಾಜಕೀಯ ಜೀವನದಲ್ಲಿ ಐದು ಬಾರಿ ಲೋಕಸಭಾ ಸದಸ್ಯರಾಗಿ, 2 ಬಾರಿ ರಾಜ್ಯಸಭೆ ಸದಸ್ಯರಾಗಿ, 4 ಬಾರಿ ಶಾಸಕರಾಗಿ ಸೇವೆ ಸಲ್ಲಿಸಿದ್ದಾರೆ. ಕೆಲ ವರ್ಷಗಳ ಕಾಲ ಜನತಾ ಪಕ್ಷಕ್ಕೆ ಹೋದರೂ ನಂತರ ಕಾಂಗ್ರೆಸ್ಗೆ ಮರಳಿ ತಮ್ಮ ಸೇವೆ ಮುಂದುವರಿಸಿದರು. ಕಾಂಗ್ರೆಸ್ ಪಕ್ಷಕ್ಕೆ ಜೈಪಾಲ್ ರೆಡ್ಡಿ ಅವರು ನೀಡಿರುವ ಕೊಡುಗೆ ಅಪಾರ ಎಂದು ಡಿಕೆಶಿ ಸ್ಮರಿಸಿದ್ದಾರೆ.
ಹಾಗೆಯೇ ಜೈಪಾಲ್ ರೆಡ್ಡಿ ಅವರ ನಿಧನದ ಸುದ್ದಿ ತಿಳಿದು ಮನಸ್ಸಿಗೆ ಬಹಳ ನೋವಾಗಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಸಂತಾಪ ಸೂಚಿಸಿದ್ದಾರೆ. ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ತಮ್ಮ ಸಂತಾಪ ಸಂದೇಶದಲ್ಲಿ ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ ಮತ್ತು ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ತುಂಬಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಂತಾಪ ಸೂಚಿಸಿದ್ದಾರೆ.