ಕರ್ನಾಟಕ

karnataka

ETV Bharat / state

ರಾಜ್ಯದಲ್ಲಿ ಅ.10 ರಿಂದ 12ರವರೆಗೆ ಭಾರಿ ಮಳೆ: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ - ಬೆಂಗಳೂರು ಸುದ್ದಿ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆ ಅಕ್ಟೋಬರ್ ಬರುವ ಭಾನುವಾರದಿಂದ ಮಂಗಳವಾರದವರೆಗೆ ರಾಜ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.

In the State Heavy rain from october 10 to 12
ರಾಜ್ಯದಲ್ಲಿ ಅ. 10 ರಿಂದ 12ರವರೆಗೆ ಭಾರೀ ಮಳೆ

By

Published : Oct 8, 2021, 7:34 PM IST

ಬೆಂಗಳೂರು: ರಾಜ್ಯದಲ್ಲಿ ಅಕ್ಟೋಬರ್ 10 ರಿಂದ 12ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ರಾಜ್ಯ ಹವಾಮಾನ ಕೇಂದ್ರ ತಜ್ಞ ಸದಾನಂದ ಅಡಿಗ ಮಾಹಿತಿ ನೀಡಿದ್ದಾರೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆ ಅಕ್ಟೋಬರ್ ಬರುವ ಭಾನುವಾರದಿಂದ ಮಂಗಳವಾರದವರೆಗೆ ರಾಜ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ.

ದಕ್ಷಿಣ ಕನ್ನಡ, ಉಡುಪಿ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಮಂಡ್ಯ, ಚಾಮರಾಜನಗರ ಮತ್ತು ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಹೆಚ್ಚಾಗುವ ಮುನ್ಸೂಚನೆ ಇದೆ. ಆದ್ದರಿಂದ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.

ರಾಜಧಾನಿಯಲ್ಲಿ ಎರಡು ಮೂರು ದಿನ ಮಳೆ:ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ ಎರಡರಿಂದ ಮೂರು ದಿನ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಸಿದ್ದಾರೆ.

ABOUT THE AUTHOR

...view details