ಬೆಂಗಳೂರು:ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಜನ್ಮ ದಿನದ ಅಂಗವಾಗಿ ರಾಜಧಾನಿಯ ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಶಂಕರ ಮಠ ಸರ್ಕಲ್ನಲ್ಲಿ ರಾಜಾಜಿನಗರ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದಿಂದ ಆಯೋಜಿಸಿರುವ ಐದು ದಿನಗಳ ಅಖಿಲ ಭಾರತ ಹಿರಿಯರ ದಕ್ಷಿಣ ವಲಯ ಪುರುಷ ಮತ್ತು ಮಹಿಳೆಯರ ವಾಲಿಬಾಲ್ ಪಂದ್ಯಾವಳಿಗೆ ಅಬಕಾರಿ ಸಚಿವ ಕೆ.ಗೋಪಾಲಯ್ಯ ಶನಿವಾರ ಸಂಜೆ ಚಾಲನೆ ನೀಡಿದರು.
ವಾಜಪೇಯಿ ಹುಟ್ಟುಹಬ್ಬದ ಅಂಗವಾಗಿ ರಾಷ್ಟ್ರೀಯ ವಾಲಿಬಾಲ್ ಪಂದ್ಯಾವಳಿಗೆ ಚಾಲನೆ - ರಾಷ್ಟ್ರೀಯ ವಾಲಿಬಾಲ್ ಪಂದ್ಯಾವಳಿಗೆ ಚಾಲನೆ
ವಾಜಪೇಯಿ ಹುಟ್ಟು ಹಬ್ಬದ ಅಂಗವಾಗಿ ರಾಷ್ಟ್ರೀಯ ವಾಲಿಬಾಲ್ ಪಂದ್ಯಾವಳಿಗೆ ಶುಕ್ರವಾರ ಚಾಲನೆ ನೀಡಲಾಯಿತು.
ರಾಷ್ಟ್ರೀಯ ವಾಲಿಬಾಲ್ ಪಂದ್ಯಾವಳಿಗೆ ಚಾಲನೆ
ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಗೋಪಾಲಯ್ಯ, ಸತತ 19 ವರ್ಷಗಳಿಂದ ರಾಜಾಜಿನಗರ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದಿಂದ ಈ ಕ್ರೀಡಾಕೂಟವನ್ನು ನಡೆಸಿಕೊಂಡು ಬರುತ್ತಿರುವುದು ಶ್ಲಾಘನೀಯ. ಕ್ರೀಡೆಯಲ್ಲಿ ಸೋಲು, ಗೆಲುವು ಮುಖ್ಯವಲ್ಲ. ಕೂಟದಲ್ಲಿ ಭಾಗವಹಿಸುವ ಕ್ರೀಡಾಸ್ಪೂರ್ತಿ ಮುಖ್ಯ ಎಂದರು.
ಕಾರ್ಯಕ್ರಮದಲ್ಲಿ ಬಿಬಿಎಂಪಿ ಮಾಜಿ ಉಪಮೇಯರ್ ಹೇಮಲತಾ ಕೆ.ಗೋಪಾಲಯ್ಯ, ನೆಲ ನರೇಂದ್ರ ಬಾಬು, ಬಿಜೆಪಿ ಮಂಡಲ ಅಧ್ಯಕ್ಷ ರಾಘವೇಂದ್ರ ಶೆಟ್ಟಿ, ಜಯಸಿಂಹ, ಶ್ರೀನಿವಾಸ್ ಕ್ರೀಡಾಕೂಟ ಆಯೋಜಕ ಎಸ್.ಹರೀಶ್ ಮತ್ತು ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.