ಬೆಂಗಳೂರು: ನಗರದ ಪ್ರತಿಷ್ಠಿತ ಐಐಎಸ್‌ಸಿ ಸಂಸ್ಥೆ ಅಭಿವೃದ್ಧಿಪಡಿಸಿರುವ ದೇಶದ ಪ್ರಪ್ರಥಮ ಮತ್ತು ಏಕೈಕ ಐಸಿಎಂಆರ್ ಅನುಮೋದಿತ ಮೊಬೈಲ್ ಆರ್ ಟಿ-ಪಿಸಿಆರ್ ಕೋವಿಡ್ ಪರೀಕ್ಷಾ ಲ್ಯಾಬ್ ಗೆ ಇಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಐಐಎಸ್ ಕ್ಯಾಂಪಸ್‌ನಲ್ಲಿ ಚಾಲನೆ ನೀಡಿ ರಾಜೀವ್ ಗಾಂಧಿ ಆರೋಗ್ಯ ವಿವಿಗೆ ಹಸ್ತಾಂತರಿಸಿದರು.
ದೇಶದ ಮೊದಲ, ಏಕೈಕ ICMR ಅನುಮೋದಿತ ಮೊಬೈಲ್ ಕೋವಿಡ್ ಲ್ಯಾಬ್‌ಗೆ ಚಾಲನೆ - Bangalore Covid Test Lab News
ದೇಶದ ಪ್ರಪ್ರಥಮ ಮತ್ತು ಏಕೈಕ ಐಸಿಎಂಆರ್ ಅನುಮೋದಿತ ಮೊಬೈಲ್ ಆರ್‌ಟಿ-ಪಿಸಿಆರ್ ಕೋವಿಡ್ ಪರೀಕ್ಷಾ ಲ್ಯಾಬ್‌ಗೆ ಐಐಎಸ್ ಕ್ಯಾಂಪಸ್‌ನಲ್ಲಿ ಚಾಲನೆ ನೀಡಲಾಯಿತು.
ಮೊಬೈಲ್ ಕೋವಿಡ್ ಪರೀಕ್ಷಾ ಲ್ಯಾಬ್ ಗೆ ಚಾಲನೆ
ಇದು ಬಯೋ ಸುರಕ್ಷತೆ ಪ್ರಮಾಣೀಕರಣ ಹೊಂದಿರುವ ಅತ್ಯಂತ ಸುಸಜ್ಜಿತ ಮೊಬೈಲ್ ಕೋವಿಡ್ ಪರೀಕ್ಷಾ ಲ್ಯಾಬ್ ಆಗಿದ್ದು, ಕೇವಲ 4 ಗಂಟೆಗಳಲ್ಲಿ ಟೆಸ್ಟ್ ವರದಿ ಪಡೆಯಬಹುದಾಗಿದೆ. ದಿನಕ್ಕೆ ಸುಮಾರು 400 ಟೆಸ್ಟ್ ನಡೆಸುವ ಸಾಮರ್ಥ್ಯ ಹೊಂದಿದೆ. ವ್ಯಾನ್ ಒಳಗೆ ಸಿಸಿ ಕ್ಯಾಮರಾ ಅಳವಡಿಸಲಾಗಿದ್ದು, ಲ್ಯಾಬ್‌ಗೆ ಬೇಕಾದ ಎಲ್ಲ ಉಪಕರಣಗಳನ್ನು ಜೋಡಣೆ ಮಾಡಲಾಗಿದೆ. ಈ ಮೊಬೈಲ್ ಲ್ಯಾಬ್ ಕಂಟೈನ್‌ಮೆಂಟ್ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯ ಟೆಸ್ಟ್ ನಡೆಸಲು ಬಳಸಬಹುದಾಗಿದೆ.
ಈ ವೇಳೆ ಐಐಎಸ್‌ಸಿ ನಿರ್ದೇಶಕರು, ರಾಜೀವ್ ಗಾಂಧಿ ವಿವಿ ಉಪಕುಲಪತಿಗಳಾದ ಡಾ.ಸಚ್ಚಿದಾನಂದ ಉಪಸ್ಥಿತರಿದ್ದರು.