ಬೆಂಗಳೂರು:ವೈದ್ಯಕೀಯ ಶಿಕ್ಷಣ ಸಂಸ್ಥೆಗಳು ಮತ್ತು ಉದ್ಯಮಿಗಳ ಮನೆ, ಕಚೇರಿ ಮೇಲೆ ದಾಳಿ ನಡೆಸಿದಾಗ ಸುಮಾರು 402 ಕೋಟಿ ತೆರಿಗೆ ವಂಚನೆ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ ಎಂದು ಆದಾಯ ತೆರಿಗೆ ಇಲಾಖೆ ಪತ್ರಿಕಾ ಪ್ರಕಟಣೆ ಹೊರಡಿಸಿದೆ.
ವೈದ್ಯಕೀಯ ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ದಾಳಿ: 402 ಕೋಟಿ ರೂ. ತೆರಿಗೆ ವಂಚನೆ ಬಯಲು
ವೈದ್ಯಕೀಯ ಶಿಕ್ಷಣ ಸಂಸ್ಥೆಗಳ ಮೇಲೆ ದಾಳಿ ಕುರಿತಂತೆ ಆದಾಯ ತೆರಿಗೆ ಇಲಾಖೆ ಪತ್ರಿಕಾ ಪ್ರಕಟನೆ ಹೊರಡಿಸಿ ಮಾಹಿತಿ ನೀಡಿದೆ.
ವೈದ್ಯಕೀಯ ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ದಾಳಿ
ದಾಳಿ ವೇಳೆ 15 ಕೋಟಿ ಹಣ ವಶಪಡಿಸಿಕೊಳ್ಳಲಾಗಿದ್ದು, 30 ಕೋಟಿ ಮೌಲ್ಯದ 81 ಕೆ.ಜಿ ಚಿನ್ನಾಭರಣ, 40 ಕೆ.ಜಿ, ಬೆಳ್ಳಿ ಮತ್ತು ಡೈಮಂಡ್ ಪತ್ತೆಯಾಗಿದೆ ಎಂದು ಐಟಿ ಇಲಾಖೆ ಮಾಹಿತಿ ನೀಡಿದೆ. ಶಿಕ್ಷಣ ಸಂಸ್ಥೆಗಳು ಆನ್ ಲೈನ್ ಮೂಲಕ ವಂಚಿಸಿ ಹಣ ಪಡೆದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಉದ್ಯಮಿಗಳ ಮನೆ, ಕಚೇರಿಗಳಲ್ಲಿ ಸಾಕಷ್ಟು ದಾಖಲೆಗಳು ಪತ್ತೆಯಾಗಿವೆ. ಜೊತೆಗೆ ದಾಖಲೆ ಇಲ್ಲದ ಸುಮಾರು 2.9 ಕೋಟಿ ಹಣ ದೊರೆತಿದೆ ಎಂದು ಆದಾಯ ತೆರಿಗೆ ಇಲಾಖೆ ಮಾಹಿತಿ ನೀಡಿದೆ.