ETV Bharat Karnataka

ಕರ್ನಾಟಕ

karnataka

ETV Bharat / state

ತೆರಿಗೆ ವಂಚನೆ ಆರೋಪ: ಬೆಂಗಳೂರು ಸೇರಿ ವಿವಿಧೆಡೆ ಆದಾಯ ತೆರಿಗೆ ಅಧಿಕಾರಿಗಳಿಂದ ದಾಳಿ - ಆದಾಯ ತೆರಿಗೆ ಅಧಿಕಾರಿಗಳಿಂದ ದಾಳಿ

ತೆರಿಗೆ ವಂಚನೆ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ವಿವಿಧೆಡೆ ಪ್ರತಿಷ್ಠಿತ ಕಾರ್ಪೊರೇಟ್​ ಕಂಪನಿಗಳ ವ್ಯವಸ್ಥಾಪಕರು, ನಿರ್ದೇಶಕರುಗಳು ಹಾಗೂ ಉದ್ಯಮಿಗಳ ಮನೆ ಮತ್ತು ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

it raids
ಬೆಂಗಳೂರು ಸೇರಿ ವಿವಿಧೆಡೆ ಆದಾಯ ತೆರಿಗೆ ಅಧಿಕಾರಿಗಳಿಂದ ದಾಳಿ
author img

By

Published : Dec 9, 2022, 12:33 PM IST

ಬೆಂಗಳೂರು: ತೆರಿಗೆ ವಂಚನೆ ಆರೋಪ ಕೇಳಿ ಬಂದ ಹಿನ್ನೆಲೆ ಪ್ರತಿಷ್ಠಿತ ಕಾರ್ಪೊರೇಟ್​ ಕಂಪನಿಗಳ ವ್ಯವಸ್ಥಾಪಕರು, ನಿರ್ದೇಶಕರುಗಳು ಹಾಗೂ ಉದ್ಯಮಿಗಳ ಮನೆ ಮತ್ತು ಕಚೇರಿಗಳ ಮೇಲೆ ಬೆಳ್ಳಂ ಬೆಳಗ್ಗೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬೆಂಗಳೂರು ಸೇರಿ ವಿವಿಧೆಡೆ ಆದಾಯ ತೆರಿಗೆ ಅಧಿಕಾರಿಗಳಿಂದ ದಾಳಿ

ಬೆಂಗಳೂರಿನ ಸಂಜಯನಗರದ ರಾಜ್ ವಿಲಾಸ್ ಪ್ಯಾಲೇಸ್, ಕೊಡಿಗೇಹಳ್ಳಿ ಬ್ರಿಗೇಡ್ ಹೋಪ್ ಅಪಾರ್ಟ್ಮೆಂಟ್, ಹೆಬ್ಬಾಳ, ಚಿಕ್ಕಬಳ್ಳಾಪುರ, ರಾಮನಗರದ ಬಿಡದಿಯ ವಿವಿಧ ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ‌ ನಡೆಸಲಾಗಿದ್ದು, ಶೋಧಕಾರ್ಯ ಮುಂದುವರೆದಿದೆ.

ಇದನ್ನೂ ಓದಿ:ತೆಲಂಗಾಣ, ಆಂಧ್ರಪ್ರದೇಶದ ವಿವಿಧ ಕಡೆಗಳಲ್ಲಿ ಐಟಿ ದಾಳಿ

ದೀರ್ಘಕಾಲದಿಂದ ಸರ್ಕಾರಕ್ಕೆ ತೆರಿಗೆ ಪಾವತಿಸದೇ ವಂಚನೆ ಹಾಗೂ ಸಾಕಷ್ಟು ಅವ್ಯವಹಾರಗಳು ನಡೆದಿರುವ ಶಂಕೆಯ ಹಿನ್ನೆಲೆಯಲ್ಲಿ ದಾಳಿ ಮಾಡಿರುವ ಅಧಿಕಾರಿಗಳು, ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.

ABOUT THE AUTHOR

...view details