ಕರ್ನಾಟಕ

karnataka

ETV Bharat / state

ಕೊರೊನಾ ಮಾರ್ಗಸೂಚಿ ಉಲ್ಲಂಘನೆ ಹೆಚ್ಚಳ: ಸರ್ಕಾರಕ್ಕೆ ನಿರ್ದೇಶನ ನೀಡಿದ ಹೈಕೋರ್ಟ್​ - High Court Direction to State Government

ಸಾಮಾಜಿಕ ಅಂತರ ಕಾಯ್ದುಕೊಳ್ಳದವರು ಮತ್ತು ಮಾಸ್ಕ್​​ ಧರಿಸದವರ ವಿರುದ್ಧ ಸಾರ್ವಜನಿಕರೇ ಖುದ್ದಾಗಿ ದೂರು ಸಲ್ಲಿಸಲು ಮುಂದಿನ ಒಂದು ವಾರದೊಳಗೆ ಕುಂದು ಕೊರತೆ ನಿವಾರಣಾ ಸಮಿತಿ ರಚಿಸುವಂತೆ ಸರ್ಕಾರಕ್ಕೆ ಹೈಕೋರ್ಟ್​ ನಿರ್ದೇಶಿಸಿದೆ.

Increase in Corona Guidance Violations: High Court Directed to Govt
ಕೊರೊನಾ ಮಾರ್ಗಸೂಚಿ ಉಲ್ಲಂಘನೆ ಹೆಚ್ಚಳ: ಸರ್ಕಾರಕ್ಕೆ ನಿರ್ದೇಶನ ನೀಡಿದ ಹೈಕೋರ್ಟ್​

By

Published : Jun 23, 2020, 11:04 PM IST

ಬೆಂಗಳೂರು:ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ವ್ಯಾಪಕವಾಗಿ ಹರಡುತ್ತಿದ್ದರೂ ಜನಪ್ರತಿಧಿಗಳು, ಸಾರ್ವಜನಿಕರು ಕೇಂದ್ರ ಸರ್ಕಾರದ ಕೋವಿಡ್-19 ಮಾರ್ಗಸೂಚಿಗಳನ್ನು ಉಲ್ಲಂಘಿಸುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ಹಲವು ನಿರ್ದೇಶನಗಳನ್ನು ನೀಡಿದೆ.

ಪ್ರಮುಖವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳದವರು ಮತ್ತು ಮಾಸ್ಕ್​​ ಧರಿಸದವರ ವಿರುದ್ಧ ಸಾರ್ವಜನಿಕರೇ ಖುದ್ದಾಗಿ ದೂರು ಸಲ್ಲಿಸಲು ಮುಂದಿನ ಒಂದು ವಾರದೊಳಗೆ ಕುಂದು ಕೊರತೆ ನಿವಾರಣಾ ಸಮಿತಿ ರಚಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಿದೆ.

ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ವೇಳೆ ಈ ನಿರ್ದೇಶನ ನೀಡಿದೆ.

ನಿರ್ದೇಶನಗಳು:

ಕೊರೊನಾ ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ಸಾರ್ವಜನಿಕರು ದೂರು ಸಲ್ಲಿಸಲು ಸರ್ಕಾರ ಕುಂದುಕೊರತೆ ನಿವಾರಣಾ ಘಟಕ ಸ್ಥಾಪಿಸಬೇಕು.

  • ವಾಟ್ಸ್ಆ್ಯಪ್, ಇಮೇಲ್, ಎಸ್ಎಂಎಸ್ ಮೂಲಕ ದೂರು ಸಲ್ಲಿಸಲು ವ್ಯವಸ್ಥೆ ರೂಪಿಸಬೇಕು.
  • ತುರ್ತು ಸಹಾಯವಾಣಿ 100ಕ್ಕೆ ಕರೆ ಮಾಡಿ ದೂರು ಸಲ್ಲಿಸಲು ವ್ಯವಸ್ಥೆ ಮಾಡಬೇಕು.
  • ಘಟಕಕ್ಕೆ ಬಂದ ದೂರನ್ನು ಅಧಿಕಾರಿಗಳು ತಕ್ಷಣವೇ ಸಮೀಪದ ಪೊಲೀಸ್ ಠಾಣೆಗೆ ರವಾನಿಸಬೇಕು.
  • ಪೊಲೀಸರು ದೂರಿನ ಮೇರೆಗೆ ಪರಿಶೀಲಿಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು.
  • ಮಾಸ್ಕ್ ಧರಿಸಿದವರ ವಿರುದ್ಧ ಸ್ಥಳದಲ್ಲಿ ದಂಡ ವಿಧಿಸಲು ಅಧಿಕಾರಿಗಳಿಗೆ ಅಧಿಕಾರ ನೀಡಬೇಕು.
  • ಕುಂದುಕೊರತೆ ನಿವಾರಣಾ ಘಟಕ ಕುರಿತು ಸಾರ್ವಜನಿಕರಿಗೆ ಮಾಹಿತಿ ಸಿಗುವಂತೆ ವ್ಯಾಪಕ ಪ್ರಚಾರ ಮಾಡಬೇಕು.

ABOUT THE AUTHOR

...view details