ಕರ್ನಾಟಕ

karnataka

By

Published : Dec 31, 2020, 3:42 PM IST

ETV Bharat / state

ಕೊರೊನಾ ಅವಧಿ: ಶೇ. 15ರಷ್ಟು ಏರಿದ ಬಾಲ್ಯ ವಿವಾಹ ಪ್ರಕರಣ

ಅಧಿಕಾರಿಗಳ ಮಾಹಿತಿಯಂತೆ, ಪ್ರಸಕ್ತ ವರ್ಷ ಲಾಕ್​ಡೌನ್ ಅವಧಿಯಲ್ಲೇ ಅತಿಹೆಚ್ಚು ಬಾಲ್ಯ ವಿವಾಹಗಳು ನಡೆದಿವೆ. ಹಾಗಿದ್ದೂ ಅಧಿಕಾರಿಗಳು ಸೂಕ್ತ ಸಮಯದಲ್ಲಿ ಕ್ರಮ ಕೈಗೊಂಡು 2074 ಬಾಲ್ಯ ವಿವಾಹಗಳನ್ನು ತಡೆದಿದ್ದಾರೆ. ಇದರ ನಡುವೆಯೂ ನಡೆದ ಬಾಲ್ಯ ವಿವಾಹ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು 108 ಎಫ್ಐಆರ್ ಗಳನ್ನು ದಾಖಲಿಸಿದ್ದಾರೆ. ಪ್ರಸಕ್ತ ವರ್ಷ ರಾಜ್ಯದಲ್ಲಿ 188 ಬಾಲ್ಯ ವಿವಾಹ ಪ್ರಕರಣಗಳು ಪತ್ತೆಯಾಗಿದ್ದು, ಹಿಂದಿನ ವರ್ಷಗಳಿಗೆ ಹೋಲಿಸಿದರೆ ಈ ಪ್ರಮಾಣ ಶೇ. 15ರಷ್ಟು ಏರಿಕೆಯಾಗಿದೆ.

increase-in-number-of-child-marriages-during-corona
ಕೊರೊನಾ ಕಾಲದಲ್ಲಿ ಶೇ. 15ರಷ್ಟು ಏರಿದ ಬಾಲ್ಯ ವಿವಾಹ ಪ್ರಕರಣಗಳು

ಬೆಂಗಳೂರು: ಅನಕ್ಷರತೆ, ಬಡತನಗಳಿಂದಾಗಿ ಇಂದಿಗೂ ಅಸ್ಥಿತ್ವದಲ್ಲಿರುವ ಬಾಲ್ಯ ವಿವಾಹ ಈ ವರ್ಷ ಕೊರೊನಾ ಹಿನ್ನೆಲೆ ಮತ್ತಷ್ಟು ಹೆಚ್ಚಾಗಿದೆ. ಪ್ರಸಕ್ತ ವರ್ಷ ರಾಜ್ಯದಲ್ಲಿ 188 ಬಾಲ್ಯ ವಿವಾಹ ಪ್ರಕರಣಗಳು ಪತ್ತೆಯಾಗಿದ್ದು, ಹಿಂದಿನ ವರ್ಷಗಳಿಗೆ ಹೋಲಿಸಿದರೆ ಈ ಪ್ರಮಾಣ ಶೇ. 15ರಷ್ಟು ಏರಿಕೆಯಾಗಿದೆ.

ಕೊರೊನಾ ಸೋಂಕು ಆವರಿಸಿದ ಬಳಿಕ ಹೆಚ್ಚಾದ ಕಾರ್ಮಿಕರ ವಲಸೆ, ನಿರುದ್ಯೋಗ, ಶಾಲೆಗಳು ನಡೆಯದಿರುವುದು, ಭವಿಷ್ಯದ ಬಗ್ಗೆ ಉಂಟಾಗಿರುವ ಆತಂಕಗಳು ಬಾಲ್ಯ ವಿವಾಹ ಹೆಚ್ಚಳಕ್ಕೆ ಕಾರಣವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆಯುಕ್ತ ಆರ್. ಎಸ್ ಪೆದ್ದಪ್ಪಯ್ಯ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಅಧಿಕಾರಿಗಳ ಮಾಹಿತಿಯಂತೆ, ಪ್ರಸಕ್ತ ವರ್ಷ ಲಾಕ್​ಡೌನ್ ಅವಧಿಯಲ್ಲೇ ಅತಿಹೆಚ್ಚು ಬಾಲ್ಯ ವಿವಾಹಗಳು ನಡೆದಿವೆ. ಹಾಗಿದ್ದೂ ಅಧಿಕಾರಿಗಳು ಸೂಕ್ತ ಸಮಯದಲ್ಲಿ ಕ್ರಮ ಕೈಗೊಂಡು 2,074 ಬಾಲ್ಯ ವಿವಾಹಗಳನ್ನು ತಡೆದಿದ್ದಾರೆ. ಇದರ ನಡುವೆಯೂ ನಡೆದ ಬಾಲ್ಯ ವಿವಾಹ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು 108 ಎಫ್ಐಆರ್ ಗಳನ್ನು ದಾಖಲಿಸಿದ್ದಾರೆ.

ರಾಜ್ಯದಲ್ಲಿ ಅತೀ ಹೆಚ್ಚು ಬಾಲ್ಯ ವಿವಾಹಗಳು ಹಾಸನದಲ್ಲಿ ಪತ್ತೆಯಾಗಿವೆ. ಹಾಸನದಲ್ಲಿ 26, ಮಂಡ್ಯದಲ್ಲಿ 25, ಮೈಸೂರಿನಲ್ಲಿ 24 ಹಾಗೂ ಬೆಳಗಾವಿಯಲ್ಲಿ 19 ಪ್ರಕರಣಗಳು ಪತ್ತೆಯಾಗಿವೆ. ಇನ್ನು ಬಳ್ಳಾರಿಯಲ್ಲಿ ನಡೆಯಲಿದ್ದ ಅತೀ ಹೆಚ್ಚು ಬಾಲ್ಯ ವಿವಾಹಗಳನ್ನು ತಡೆಯಲಾಗಿದೆ. ಬಳ್ಳಾರಿಯಲ್ಲಿ 218, ಮೈಸೂರಿನಲ್ಲಿ 177, ಬೆಳಗಾವಿಯಲ್ಲಿ 131 ಬಾಲ್ಯ ವಿವಾಹಗಳನ್ನು ತಡೆಯಲಾಗಿದೆ.

ಆದರೆ, ಈ ಅವಧಿಯಲ್ಲಿ ಉಡುಪಿ, ಕಲಬುರ್ಗಿ ಹಾಗೂ ಚಿಕ್ಕಮಗಳೂರಿನಿಂದ ಒಂದೇ ಒಂದು ಪ್ರಕರಣ ವರದಿಯಾಗಿಲ್ಲ. ಉತ್ತರ ಕರ್ನಾಟಕ ಭಾಗದಲ್ಲೇ ಹೆಚ್ಚು ಪ್ರಕರಣಗಳು ವರದಿಯಾಗಿದ್ದು, ಇದಕ್ಕೆ ಅನಕ್ಷರತೆ, ಬಡತನಗಳು ಪ್ರಮುಖ ಕಾರಣವಾಗಿವೆ.

ಇನ್ನೂ ಬಳ್ಳಾರಿ, ಮೈಸೂರು, ಬಾಗಲಕೋಟೆ, ಧಾರವಾಡ, ಬೆಳಗಾವಿ, ಚಿತ್ರದುರ್ಗ, ಯಾದಗಿರಿ, ರಾಯಚೂರು ಗ್ರಾಮಾಂತರ ಪ್ರದೇಶಗಳಲ್ಲಿ ಹೆಚ್ಚು ಪ್ರಕರಣಗಳು ಕಂಡು ಬಂದಿದ್ದು, ಅವುಗಳನ್ನು ತಡೆಗಟ್ಟುವಲ್ಲಿ ಅಧಿಕಾರಿಗಳು ಬಹುತೇಕ ಯಶಸ್ವಿಯಾಗಿದ್ದಾರೆ.

ಬಾಲ್ಯ ವಿವಾಹ ನಿಯಂತ್ರಿಸಲು ರಾಜ್ಯದಲ್ಲಿ ಬಾಲ್ಯ ವಿವಾಹ ನಿಷೇಧ ಕಾಯ್ದೆ - 2006ನ್ನು ಜಾರಿಗೊಳಸಲಾಗಿದೆ. ಇದಕ್ಕೆ ಪೂರಕವಾಗಿ ಬಾಲನ್ಯಾಯ( ಪೋಷಣೆ ಮತ್ತು ರಕ್ಷಣೆ) ಕಾಯ್ದೆ-2000, ಭಾರತೀಯ ದಂಡ ಸಂಹಿತೆ ಅಡಿಯಲ್ಲಿಯೂ ಬಾಲ್ಯ ವಿವಾಹ ನಿಯಂತ್ರಣಕ್ಕೆ ಅವಕಾಶ ನೀಡಲಾಗಿದೆ. ಐಪಿಸಿ ಸೆಕ್ಷನ್ 325(2)ರ ಪ್ರಕಾರ 18 ವರ್ಷದೊಳಗಿನ ಪತ್ನಿಯ ಜೊತೆಗಿನ ದೈಹಿಕ ಸಂಪರ್ಕವೂ ಅತ್ಯಾಚಾರ ಆರೋಪದಡಿ ಶಿಕ್ಷಾರ್ಹ ಅಪರಾಧವಾಗಿದೆ. ಬಾಲ್ಯ ವಿವಾಹ ನಿಷೇಧ ಕಾಯ್ದೆಯ ನಿಯಮಗಳ ಪ್ರಕಾರ ಬಾಲ್ಯ ವಿವಾಹ ನೆರವೇರಿಸುವ ಪೋಷಕರಿಗೂ 1 ರಿಂದ 2 ವರ್ಷ ಜೈಲು ಶಿಕ್ಷೆ, 1 ಲಕ್ಷ ರೂಪಾಯಿ ದಂಡ ವಿಧಿಸಲು ಅವಕಾಶ ನೀಡಲಾಗಿದೆ. ಅಂತೆಯೇ ಬಾಲ್ಯ ವಿವಾಹ ಅನೂರ್ಜಿತವಾಗಿರುತ್ತದೆ. ಬಾಲ್ಯ ವಿವಾಹ ತಡೆಗಟ್ಟಲು ರಾಜ್ಯ, ಜಿಲ್ಲೆ, ತಾಲೂಕು ಹಾಗೂ ಗ್ರಾಮ ಪಂಚಾಯ್ತಿ ಮಟ್ಟದಲ್ಲಿ ಸಮಿತಿಗಳನ್ನು ರೂಪಿಸಲಾಗಿದೆ. ಈ ಸಮಿತಿಗಳಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪೊಲೀಸ್, ಸಮಾಜ ಕಲ್ಯಾಣ ಇಲಾಖೆ, ಕಾರ್ಮಿಕ ಇಲಾಖೆ, ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಂಯೋಜಿತರಾಗಿದ್ದು, ಬಾಲ್ಯ ವಿವಾಹ ತಡೆಗಟ್ಟಲು ನಿರಂತರ ಶ್ರಮಿಸುತ್ತಿದ್ದಾರೆ.

2020ರ ಬಾಲ್ಯ ವಿವಾಹ ಪ್ರಕರಣಗಳ ಮಾಹಿತಿ:

ಜಿಲ್ಲೆ ತಡೆಗಟ್ಟಲಾದ ಪ್ರಕರಣಗಳು ಬಾಲ್ಯ ವಿವಾಹ ಪ್ರಕರಣಗಳು ದಾಖಲಾದ ಎಫ್ಐಆರ್ ಸಂಖ್ಯೆ
ಹಾಸನ 83 26 7
ಮಂಡ್ಯ 40 25 7
ಮೈಸೂರು 177 24 23
ಬೆಳಗಾವಿ 131 19 5
ರಾಮನಗರ 83 13 8
ಒಟ್ಟು 207 4 18 108

ABOUT THE AUTHOR

...view details