ಬೆಂಗಳೂರು:ಸಿಲಿಕಾನ್ ಸಿಟಿಯಲ್ಲಿ ಮತ್ತೆ ಕೊರೊನಾ ಮಹಾ ಸ್ಫೋಟವಾಗಿದ್ದು, ಬೊಮ್ಮನಹಳ್ಳಿ ವಲಯದಲ್ಲಿ ಅತಿ ಹೆಚ್ಚು ಮೈಕ್ರೋ ಕಂಟೇನ್ಮೆಂಟ್ ಝೋನ್ ಗುರುತಿಸಲಾಗಿದೆ.
154ಕ್ಕೆ ಏರಿದ ಕಂಟೇನ್ಮೆಂಟ್ ಝೋನ್ಗಳ ಸಂಖ್ಯೆ:
ಪಾಲಿಕೆಯ ಎಂಟು ವಲಯಗಳಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗಿದ್ದು, ಮೈಕ್ರೋ ಕಂಟೇನ್ಮೆಂಟ್ ಝೋನ್ಗಳ ಸಂಖ್ಯೆ 154ಕ್ಕೆ ಏರಿಕೆಯಾಗಿದೆ. ಬೊಮ್ಮನಹಳ್ಳಿ 49, ಮಹದೇವಪುರ 48, ದಕ್ಷಿಣ 15, ಪಶ್ಚಿಮ 16, ಪೂರ್ವ 12, ಯಲಹಂಕ 10, ದಾಸರಹಳ್ಳಿ 3, ಆರ್ಆರ್ ನಗರದಲ್ಲಿ 1 ಮೈಕ್ರೋ ಕಂಟೇನ್ಮೆಂಟ್ಗಳನ್ನು ಗುರುತಿಸಲಾಗಿದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆರೋಗ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ.