ಬೆಂಗಳೂರು :ಮಾನವ ವನ್ಯಜೀವಿ ಸಂಘರ್ಷದಿಂದ ಹಸು, ಎಮ್ಮೆ , ಕೋಣ ಮೃತಪಟ್ಟಲ್ಲಿ ಅವುಗಳ ಮಾಲೀಕರಿಗೆ ಈಗ ನೀಡಲಾಗುತ್ತಿರುವ ಪರಿಹಾರ ಹಣವನ್ನು 10 ಸಾವಿರದಿಂದ 75 ಸಾವಿರ ರೂಪಾಯಿಗಳಿಗೆ ಹೆಚ್ಚಿಸಲಾಗಿದೆ ಎಂದು ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ತಿಳಿಸಿದ್ದಾರೆ.
ಈ ಸಂಬಂಧ ನಿನ್ನೆ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ. ವನ್ಯಜೀವಿಗಳಿಂದ ಸಾಕು ಪ್ರಾಣಿಗಳ ಹತ್ಯೆ ಆದಲ್ಲಿ ತಕ್ಷಣಕ್ಕೆ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು 20 ಸಾವಿರ ರೂಪಾಯಿ ಬಿಡುಗಡೆ ಮಾಡಲು ಅವಕಾಶ ನೀಡಲಾಗಿದೆ. ಆ ನಂತರ ಸ್ಥಳೀಯ ಪಶು ವೈದ್ಯಾಧಿಕಾರಿಗಳು ಸತ್ತ ಸಾಕುಪ್ರಾಣಿಯ ಪರಿಶೀಲನೆ ನಡೆಸಿ ಪ್ರಮಾಣ ಪತ್ರ ನೀಡಿದ ನಂತರ ಉಳಿದ ಮೊತ್ತ ( ಗರಿಷ್ಠ ರೂ. 75000 - 00 ಮಿತಿಗೆ ಒಳಪಟ್ಟು ) ಪಾವತಿಸಬಹುದಾಗಿದೆ ಎಂದು ಸಚಿವರು ತಿಳಿಸಿದ್ದಾರೆ.