ಬೆಂಗಳೂರು :ಪ್ರಸಕ್ತ ಸಾಲಿನ ಖಾಸಗಿ ಕಾಲೇಜಿನ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಶುಲ್ಕವನ್ನು ರಾಜ್ಯ ಸರ್ಕಾರ ಹೆಚ್ಚಿಸಿದೆ. ಖಾಸಗಿ ಕಾಲೇಜುಗಳಲ್ಲಿನ ಸರ್ಕಾರಿ ಕೋಟಾ ಸೀಟುಗಳ ಶುಲ್ಕ ಶೇ.15ರಷ್ಟು, ಆಡಳಿತ ಮಂಡಳಿ ಕೋಟಾ ಸೀಟುಗಳ ಶುಲ್ಕ ಶೇ.25ರಷ್ಟು ಹೆಚ್ಚಿಸಲಾಗಿದೆ.
ವೈದ್ಯಕೀಯ ಕೋರ್ಸ್‌ಗಳ ಶುಲ್ಕ ಹೆಚ್ಚಳ... ಸರ್ಕಾರದ ವಿರುದ್ಧ ಪೋಷಕರು, ವಿದ್ಯಾರ್ಥಿಗಳ ಆಕ್ರೋಶ - Increase medical seat fees
ಕೋವಿಡ್ ಹೊಡೆತ ಕೊಟ್ಟಿರುವ ಈ ಕಷ್ಟದ ಪರಿಸ್ಥಿತಿಯಲ್ಲಿ ಪೋಷಕರು ಕಷ್ಟಪಟ್ಟು ಓದಿಸುತ್ತಿದ್ದಾರೆ. ಆದರೆ, ಪೋಷಕರ, ವಿದ್ಯಾರ್ಥಿಗಳ ಕಷ್ಟ ಆಲಿಸದೆ ರಾಜ್ಯ ಸರ್ಕಾರ ವಿದ್ಯಾರ್ಥಿ ವಿರೋಧಿ ನೀತಿ ಅನುಸರಿಸುತ್ತಿದೆ..
ಖಾಸಗಿ ವೈದ್ಯಕೀಯ ಕಾಲೇಜುಗಳ ಆಡಳಿತ ಮಂಡಳಿಯೊಂದಿಗೆ ಈ ಕುರಿತು ಒಪ್ಪಂದಕ್ಕೆ ಸಹಿ ಹಾಕಲಾಗಿದ್ದು, ಈ ನಿರ್ಧಾರದ ಪರಿಣಾಮ 2020-21ನೇ ಶೈಕ್ಷಣಿಕ ವರ್ಷದಲ್ಲಿ ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಸರ್ಕಾರಿ ಕೋಟಾದ ಸೀಟುಗಳ ಶುಲ್ಕ 1,28,746 ರೂ. ಹಾಗೂ ಖಾಸಗಿ ಕೋಟಾದ ಸೀಟುಗಳ ಶುಲ್ಕ ₹9,81,956ಕ್ಕೆ ಏರಿಸಲಾಗಿದೆ. ದಂತ ವೈದ್ಯಕೀಯ ಕಾಲೇಜುಗಳಲ್ಲಿ ಶುಲ್ಕದ ಮೊತ್ತ ಕ್ರಮವಾಗಿ 83,356 ರೂ. ಹಾಗೂ ₹6,66,023 ಗೆ ಏರಿಸಲಾಗಿದೆ.
ಈ ನಿರ್ಧಾರಕ್ಕೆ ಪೋಷಕರು, ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೋವಿಡ್ ಹೊಡೆತ ಕೊಟ್ಟಿರುವ ಈ ಕಷ್ಟದ ಪರಿಸ್ಥಿತಿಯಲ್ಲಿ ಪೋಷಕರು ಕಷ್ಟಪಟ್ಟು ಓದಿಸುತ್ತಿದ್ದಾರೆ. ಆದರೆ, ಪೋಷಕರ, ವಿದ್ಯಾರ್ಥಿಗಳ ಕಷ್ಟ ಆಲಿಸದೆ ರಾಜ್ಯ ಸರ್ಕಾರ ವಿದ್ಯಾರ್ಥಿ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಉತ್ಕರ್ಶ್ ಎಂಬ ವಿದ್ಯಾರ್ಥಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.