ಕರ್ನಾಟಕ

karnataka

ETV Bharat / state

ಕೊರೊನಾ ಭೀತಿ: ಬೆಂಗಳೂರಿನಿಂದ ಸ್ವಗ್ರಾಮಗಳತ್ತ ಮುಖ ಮಾಡುತ್ತಿದ್ದಾರೆ ಜನ

ದಿನೇ ದಿನೆ ಸಿಲಿಕಾನ್​ ಸಿಟಿಯಲ್ಲಿ ಕೊರೊನಾ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆ ಬೆಂಗಳೂರಿನಿಂದ ತಮ್ಮ ತಮ್ಮ ಊರಿನತ್ತ ಮುಖ ಮಾಡುತ್ತಿದ್ದಾರೆ. ಹೀಗಾಗಿ ನೆಲಮಂಗಲದ ನವಯುಗ ಟೋಲ್ ಬಳಿ ಟ್ರಾಫಿಕ್ ಜಾಮ್ ಕಂಡುಬಂತು.

Increasing number of Corona cases: People leaving Bangalore
ಕೊರೊನಾ ಭೀತಿ: ಬೆಂಗಳೂರು ತೊರೆಯುತ್ತಿರುವ ಜನರು

By

Published : Jun 28, 2020, 1:21 PM IST

ನೆಲಮಂಗಲ(ಬೆಂಗಳೂರು): ನಿನ್ನೆ ಒಂದೇ ದಿನದಲ್ಲಿ ರಾಜ್ಯದಲ್ಲಿ 918 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಅದರಲ್ಲಿ 596 ಪ್ರಕರಣಗಳು ಬೆಂಗಳೂರಿನಲ್ಲಿ ಪತ್ತೆಯಾಗಿವೆ. ಇದರಿಂದ ಗಾಬರಿಗೊಂಡಿರುವ ಜನ ಬೆಂಗಳೂರಿನಿಂದ ತಮ್ಮ ತಮ್ಮ ಊರಿನತ್ತ ಮುಖ ಮಾಡುತ್ತಿದ್ದಾರೆ.

ಕೊರೊನಾ ಭೀತಿ: ಬೆಂಗಳೂರು ತೊರೆಯುತ್ತಿರುವ ಜನರು

ರಾಜ್ಯದಲ್ಲಿ ಹೆಚ್ಚುತ್ತಿರುವ ಪ್ರಕರಣಗಳಿಂದ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ಜುಲೈ 5 ರಿಂದ ಪ್ರತೀ ಭಾನುವಾರ ರಾಜ್ಯವನ್ನು ಲಾಕ್ ಡೌನ್ ಮಾಡಲು ಸಿದ್ಧತೆ ನಡೆಸಿದೆ. ಲಾಕ್​ಡೌನ್​ ಸಡಿಲಗೊಂಡಿದ್ದರೂ ಕೈಗಾರಿಕೆಗಳು ಮತ್ತು ವಾಣಿಜ್ಯ ವಹಿವಾಟುಗಳು ಎಂದಿನಂತೆ ನಡೆಯುತ್ತಿಲ್ಲ. ಈಗ ಮತ್ತೆ ಲಾಕ್​ ಮಾಡಿದರೆ ಬಹುತೇಕರಿಗೆ ಜೀವನ ನಡೆಸಲು ಕಷ್ಟವಾಗುತ್ತದೆ. ಹೀಗಾಗಿ ನಗರದಲ್ಲೇ ಇದ್ದು, ಪರದಾಡುವುಕ್ಕಿಂತ ಜೀವ ಉಳಿದರೆ ಸಾಕು ಎಂದು ಸ್ವಗ್ರಾಮಗಳೆಡೆಗೆ ತೆರಳುತ್ತಿದ್ದಾರೆ. ಇದರಿಂದಾಗಿ ಊರಿಗೆ ಹೋಗುವವರ ಸಂಖ್ಯೆ ಹೆಚ್ಚಾಗಿದ್ದು, ನೆಲಮಂಗಲದ ನವಯುಗ ಟೋಲ್ ಬಳಿ ಟ್ರಾಫಿಕ್ ಜಾಮ್ ಕಂಡುಬಂತು.

ABOUT THE AUTHOR

...view details