ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಸಂಜೆ ಉನ್ನತ ಮಟ್ಟದ ಸಮಿತಿ ಸಭೆ ಕರೆದಿದ್ದಾರೆ.
ಸಂಜೆ 5 ಗಂಟೆಗೆ ವಿಕಾಸಸೌಧದಲ್ಲಿ ಸಿಎಂ ಬಿಎಸ್ವೈ ಸಭೆ ನಡೆಸಲಿದ್ದು, ಸಭೆಯಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಆರೋಗ್ಯ ಸಚಿವ ಡಾ. ಸುಧಾಕರ್, ಕೊರೊನಾ ತಾಂತ್ರಿಕ ಸಲಹಾ ಸಮಿತಿ ಸದಸ್ಯರು ಸೇರಿದಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ಈ ವೇಳೆ ಕೊರೊನಾ ನಿಯಂತ್ರಣ ಕುರಿತು ಸಭೆಯಲ್ಲಿ ಮಹತ್ವದ ಚರ್ಚೆ ನಡೆಸಲಾಗುತ್ತದೆ.