ಕರ್ನಾಟಕ

karnataka

By

Published : Aug 15, 2020, 7:08 PM IST

ETV Bharat / state

ನ್ಯಾಯದೇಗುಲದಲ್ಲಿ ಸ್ವಾತಂತ್ರ್ಯೋತ್ಸವ: ನ್ಯಾ.ಅರವಿಂದ್ ಕುಮಾರ್​ರಿಂದ ಧ್ವಜಾರೋಹಣ

ಹೈಕೋರ್ಟ್ ಹಿರಿಯ ನ್ಯಾಯಮೂರ್ತಿ ಅರವಿಂದ ಕುಮಾರ್ ಅವರು ಬೆಂಗಳೂರು ನಗರ ಜಿಲ್ಲಾ ಮೀಸಲು ಪೊಲೀಸ್ ಪಡೆಯಿಂದ ಗೌರವ ವ೦ದನೆ ಸ್ವೀಕರಿಸಿ, ಧ್ವಜಾರೋಹಣ ಮಾಡಿದರು. ಬಳಿಕ ಪೊಲೀಸ್ ಬ್ಯಾಂಡ್ ಮೂಲಕ ರಾಷ್ಟ್ರಗೀತೆಯನ್ನು ನುಡಿಸಲಾಯಿತು.

ನ್ಯಾಯದೇಗುಲದಲ್ಲಿ ಸ್ವಾತಂತ್ರ್ಯೋತ್ಸವ
ನ್ಯಾಯದೇಗುಲದಲ್ಲಿ ಸ್ವಾತಂತ್ರ್ಯೋತ್ಸವ

ಬೆಂಗಳೂರು:ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ಮಧ್ಯಸ್ಥಿಕೆ ಕೇಂದ್ರ, ಕೌಟುಂಬಿಕ ನ್ಯಾಯಾಲಯ ಹಾಗೂ ಕಾರ್ಮಿಕ ನ್ಯಾಯಾಲಯದ ನ್ಯಾಯಾಧೀಶರು, ಅಧಿಕಾರಿಗಳು ಹಾಗೂ ಸಿಬ್ಬಂದಿ ನಗರದ ಸಿದ್ದಯ್ಯ ರಸ್ತೆಯಲ್ಲಿರುವ ನ್ಯಾಯ ದೇಗುಲದಲ್ಲಿ 74ನೇ ಸ್ವಾತಂತ್ರ್ಯ ದಿನವನ್ನು ಆಚರಿಸಿದರು.

ನ್ಯಾಯದೇಗುಲದಲ್ಲಿ ಸ್ವಾತಂತ್ರ್ಯೋತ್ಸವ

ಹೈಕೋರ್ಟ್ ಹೊರಡಿಸಿರುವ ಮಾರ್ಗಸೂಚಿಗಳ ಅನ್ವಯ ಸರಳವಾಗಿ ನಡೆದ ಕಾರ್ಯಕ್ರಮದಲ್ಲಿ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷರೂ ಆದ ಹೈಕೋರ್ಟ್ ಹಿರಿಯ ನ್ಯಾಯಮೂರ್ತಿ ಅರವಿಂದ ಕುಮಾರ್ ಅವರು ಬೆಂಗಳೂರು ನಗರ ಜಿಲ್ಲಾ ಮೀಸಲು ಪೊಲೀಸ್ ಪಡೆಯಿಂದ ಗೌರವ ವ೦ದನೆ ಸ್ವೀಕರಿಸಿ, ಧ್ವಜಾರೋಹಣ ಮಾಡಿದರು. ಬಳಿಕ ಪೊಲೀಸ್ ಬ್ಯಾಂಡ್ ಮೂಲಕ ರಾಷ್ಟ್ರಗೀತೆ ನುಡಿಸಲಾಯಿತು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹೆಚ್.ಶಶಿಧರ ಶೆಟ್ಟಿ, ಕೌಟುಂಬಿಕ ನ್ಯಾಯಾಲಯದ ಪ್ರಧಾನ ನ್ಯಾಯಧೀಶರಾಧ ಜಿ.ಬಸವರಾಜು, ಮಧ್ಯಸ್ಥಿಕೆ ಕೇಂದ್ರದ ನಿರ್ದೇಶಕರಾದ ಹಿದಾಯಿತ್ ಉಲ್ಲಾ ಷರೀಫ್, ಕಾರ್ಮಿಕ ನ್ಯಾಯಾಲಯ ಪ್ರಧಾನ ನ್ಯಾಯಾಧೀಶರಾದ ಚಿಕ್ಕೋರ್ದೆ, ಐಟಿ ನ್ಯಾಯಾಲಯ ನ್ಯಾಯಾಧೀಶರಾದ ನಾಗರತ್ನ ಹಾಗೂ ಪ್ರಾಧಿಕಾರಗಳ ಮತ್ತು ನ್ಯಾಯಾಲಯ ಸಿಬ್ಬಂದಿ ಉಪಸ್ಥಿತರಿದ್ದರು.

ABOUT THE AUTHOR

...view details