ಬೆಂಗಳೂರು: ಸ್ವಾತಂತ್ರ್ಯ ದಿನದಂದು ರಜೆ ಘೋಷಣೆ ಮಾಡುವ ಬದಲು ಅಂದು ಎಲ್ಲ ಶಾಲೆಗಳಲ್ಲಿ ವಿಜೃಂಭಣೆಯಿಂದ ಸ್ವಾತಂತ್ರ್ಯ ದಿನವನ್ನು ಆಚರಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ.
ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕಡ್ಡಾಯ ಸ್ವಾತಂತ್ರ್ಯ ದಿನಾಚರಣೆಗೆ ಸುತ್ತೋಲೆ - ಸಾರ್ವಜನಿಕ ಶಿಕ್ಷಣ ಇಲಾಖೆ
ಸ್ವಾತಂತ್ರ್ಯ ದಿನದಂದು ಶಾಲೆಗಳಿಗೆ ರಜೆಯಿಲ್ಲ. ಹಾಗೆಯೇ ಕಡ್ಡಾಯವಾಗಿ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ವಿಜೃಂಭಣೆಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಆವರಿಸುವಂತೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.
![ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕಡ್ಡಾಯ ಸ್ವಾತಂತ್ರ್ಯ ದಿನಾಚರಣೆಗೆ ಸುತ್ತೋಲೆ](https://etvbharatimages.akamaized.net/etvbharat/prod-images/768-512-4101247-thumbnail-3x2-ind.jpg)
ರಾಜ್ಯದ ಎಲ್ಲ ಶಾಲೆಗಳಲ್ಲಿ ಕಡ್ಡಾಯ ಸ್ವಾತಂತ್ರ್ಯ ದಿನಾಚರಣೆಗೆ ಇಲಾಖೆ ಆದೇಶ
ಭಾರತವು ಸ್ವಾತಂತ್ರ್ಯ ಹೊಂದಿದ ದಿನವಾದ ಆಗಸ್ಟ್ 15ರಂದು ಸ್ವಾತಂತ್ರ್ಯ ದಿನ ಆಚರಿಸುವುದು ಭಾರತೀಯರಾದ ನಮ್ಮೆಲ್ಲರ ಆದ್ಯ ಕರ್ತವ್ಯ. ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಆಗಸ್ಟ್ 15ರಂದು ಕಡ್ಡಾಯವಾಗಿ ಸ್ವಾತಂತ್ರ್ಯ ದಿನವನ್ನ ವಿಜೃಂಭಣೆಯಿಂದ ಆಚರಿಸಿ. ಆ ದಿನದಂದು ಯಾವುದೇ ಶಾಲೆಗಳಿಗೆ ರಜೆ ಘೋಷಿಸದೆ ತಮ್ಮ ತಮ್ಮ ಶಾಲೆಯಲ್ಲಿ ಸ್ವಾತಂತ್ರ್ಯ ದಿನವನ್ನು ಕಡ್ಡಾಯವಾಗಿ ಕಟ್ಟುನಿಟ್ಟಾಗಿ ಆಚರಿಸುವಂತೆ ಆಯಾ ಜಿಲ್ಲಾ ಉಪ ನಿರ್ದೇಶಕರುಗಳಿಗೆ ಸೂಚಿಸಲಾಗಿದೆ.