ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆವರಣದಲ್ಲಿ 74 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಯಿತು.
ಬಿಬಿಎಂಪಿಯಲ್ಲಿ ಸರಳ ಸ್ವಾತಂತ್ರ್ಯ ದಿನಾಚರಣೆ - Independence Day at BBMP
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆವರಣದಲ್ಲಿ 74ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಯಿತು.
ಬಿಬಿಎಂಪಿ ಮೇಯರ್ ಗೌತಮ್ ಕುಮಾರ್, ಉಪಮೇಯರ್ ರಾಮ್ ಮೋಹನ್ ರಾಜ್, ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಹಾಗೂ ವಿಪಕ್ಷ ನಾಯಕ ವಾಜಿದ್ ಧ್ವಜಾರೋಹಣದಲ್ಲಿ ಭಾಗಿಯಾಗಿದ್ದರು. ಹಾಗೆಯೇ ವಿಶೇಷವಾಗಿ ಕೊರೊನಾ ವಾರಿಯರ್ಸ್ ಹಾಗೂ ಕೊರೊನಾದಿಂದ ಗುಣಮುಖರಾದವರೊಂದಿಗೆ ಸರಳವಾಗಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.
ಈ ವೇಳೆ ಮಾತನಾಡಿದ ಮೇಯರ್ ಗೌತಮ್ ಕುಮಾರ್, ಎಲ್ಲರಿಗೂ ಸ್ವಾತಂತ್ರ್ಯೋತ್ಸವದ ಶುಭಾಶಯ ತಿಳಿಸಿದರು. ಕೊರೊನಾದಿಂದಾಗಿ ಈ ಬಾರಿ ಅದ್ಧೂರಿ ಸ್ವಾತಂತ್ರ್ಯ ದಿನವನ್ನು ಆಚರಿಸಲು ಆಗಿಲ್ಲ. ಆದರೂ ಶಾಲಾ ಮಕ್ಕಳು, ಕೊರೊನಾ ವಾರಿಯರ್ಸ್ ಜೊತೆ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದರ ಮೂಲಕ ಸರಳವಾಗಿ ಸ್ವಾತಂತ್ರ್ಯ ದಿನ ಆಚರಿಸಲಾಗಿದೆ ಎಂದರು.