ಬೆಂಗಳೂರು:ರಾಜ್ಯ ಸಮ್ಮಿಶ್ರ ಸರ್ಕಾರಕ್ಕೆ ಮೇಲಿಂದ ಮೇಲೆ ಶಾಕ್ ಎದುರಾಗುತ್ತಿದ್ದು, ಇದೀಗ ಮತ್ತೊಬ್ಬ ಪಕ್ಷೇತರ ಶಾಸಕ ಹಾಗೂ ಸಚಿವ ಆರ್.ಶಂಕರ್ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈಗೆ ಹಾರಿದ್ದಾರೆ ಎಂದು ತಿಳಿದು ಬಂದಿದೆ.
ರಾಜೀನಾಮೆ ನೀಡಿ ಸದ್ದಿಲ್ಲದೇ ಮುಂಬೈಗೆ ಹಾರಿದ ಆರ್.ಶಂಕರ್... ಬಿಎಸ್ವೈ ಪಿಎ ಸಂತೋಷ್ ಸಾಥ್!? - ಪಕ್ಷೇತರ ಶಾಸಕ
ರಾಜ್ಯ ಸಮ್ಮಿಶ್ರ ಸರ್ಕಾರಕ್ಕೆ ಇದೀಗ ಮತ್ತೊಂದು ಶಾಕ್ ಎದುರಾಗಿದ್ದು, ಪಕ್ಷೇತರ ಶಾಸಕ ಆರ್.ಶಂಕರ್ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಮುಂಬೈಗೆ ಪ್ರಯಾಣ
ಬೆಂಗಳೂರು ವಿಮಾನ ನಿಲ್ದಾಣ ಹೆಚ್ಎಎಲ್ನಿಂದ ವಿಮಾನದಲ್ಲಿ ಮುಂಬೈಗೆ ಅವರು ಪ್ರಯಾಣ ಬೆಳೆಸಿದ್ದಾರೆ ಎಂದು ತಿಳಿದು ಬಂದಿದೆ. ಈ ವೇಳೆ ಅವರೊಂದಿಗೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿಎಸ್ ಯಡಿಯೂರಪ್ಪನವರ ಪಿಎ ಸಂತೋಷ್ ಕಾಣಿಸಿಕೊಂಡಿದ್ದು, ಅವರನ್ನ ಮುಂಬೈಗೆ ವಿಮಾನ ಹತ್ತಿಸಿದ್ದಾರೆಂದು ತಿಳಿದು ಬಂದಿದೆ.
ಇಂದು ಬೆಳಗ್ಗೆ ಪಕ್ಷೇತರ ಶಾಸಕ ಎಚ್.ನಾಗೇಶ್ ಮುಂಬೈಗೆ ತೆರಳಿದ್ದರು. ಇದರ ಬೆನ್ನಲ್ಲೇ ಇದೀಗ ಈ ಬೆಳವಣಿಗೆ ಕಂಡು ಬಂದಿದೆ. ರಾಣೆಬೆನ್ನೂರು ಶಾಸಕ ಆರ್. ಶಂಕರ್ ಕಳೆದ ತಿಂಗಳು ನಡೆದ ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಎರಡನೇ ಬಾರಿ ಸಚಿವರಾಗಿ ಎಚ್.ಡಿ. ಕುಮಾರಸ್ವಾಮಿ ಸಂಪುಟ ಸೇರಿದ್ದರು.
Last Updated : Jul 8, 2019, 6:45 PM IST