ಬೆಂಗಳೂರು:ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವೆ ಜೂನ್ 19ರಂದು ಟಿ20 ಕ್ರಿಕೆಟ್ ಪಂದ್ಯ ನಡೆಯಲಿದ್ದು, ಅಂದು ಮೆಟ್ರೋ ರೈಲು ಸಂಚಾರವನ್ನು ಮಧ್ಯರಾತ್ರಿ 1.30ರ ತನಕ ವಿಸ್ತರಿಸಲು ಬಿಎಂಆರ್‌ಸಿಎಲ್ ನಿರ್ಧರಿಸಿದೆ.
ಅಂತಿಮ ನಿಲ್ದಾಣಗಳಿಂದ ರಾತ್ರಿ 1 ಗಂಟೆಗೆ ಕೊನೆಯ ರೈಲುಗಳು ಹೊರಡಲಿವೆ. ನಾಡಪ್ರಭು ಕೆಂಪೇಗೌಡ ನಿಲ್ದಾಣದಿಂದ 1.30ಕ್ಕೆ ಕೊನೆಯ ರೈಲು ಸಂಚರಿಸಲಿದೆ. ಪಂದ್ಯ ನೋಡಲು ಬರುವಾಗ ಎಂದಿನಂತೆ ಸ್ಮಾರ್ಟ್ ಕಾರ್ಡ್ ಮತ್ತು ಟೋಕನ್ ಪಡೆದು ಪ್ರಯಾಣಿಸಬೇಕು. ಪಂದ್ಯ ಮುಗಿದ ಬಳಿಕ ನೂಕುನುಗ್ಗಲು ತಪ್ಪಿಸಲು ಮುಂಚಿತವಾಗಿಯೇ ಪೇಪರ್ ಟಿಕೆಟ್ ಲಭ್ಯವಿರಲಿದೆ.