ಬೆಂಗಳೂರು:ಬಿಬಿಎಂಪಿ ವ್ಯಾಪ್ತಿಯ ಇಂದಿರಾ ಕ್ಯಾಂಟೀನ್ಗಳನ್ನು ಮುಚ್ಚಿಲ್ಲ. ಆದರೆ, ಗ್ರಾಹಕರಿಲ್ಲದ 'ಇಂದಿರಾ ಮೊಬೈಲ್ ಕ್ಯಾಂಟೀನ್ ಗಳನ್ನು ಸ್ಥಗಿತಗೊಳಿಸಲಾಗಿದೆ' ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ.
ಮಾಧ್ಯಮಗಳಿಗೆ ಈ ಕುರಿತು ಪ್ರತಿಕ್ರಿಯೆ ನೀಡಿರುವ ಗಿರಿನಾಥ್ 18 ಇಂದಿರಾ ಮೊಬೈಲ್ ಕ್ಯಾಂಟೀನ್‌ಗಳು ಕಾರ್ಯನಿರ್ವಹಿಸುತ್ತಿದ್ದವು. ಹಲವು ತಿಂಗಳಿಂದ ಈ ಕ್ಯಾಂಟೀನ್‌ಗಳಿಗೆ ಗ್ರಾಹಕರೇ ಇರಲಿಲ್ಲ, ನಡೆಸುವುದು ತೀರಾ ಕಷ್ಟವಾಗಿತ್ತು, ಪರಿಶೀಲಿಸಿ ಕ್ರಮಕ್ಕೆ ಸೂಚಿಸಲಾಗಿತ್ತು. ಹೀಗಾಗಿ ಒಂದೊಂದನ್ನೇ ನಿಲ್ಲಿಸಲಾಗಿದೆ. ಗ್ರಾಹಕರೇ ಇಲ್ಲದ ಮೇಲೆ ಅದನ್ನು ಉಳಿಸಿಕೊಳ್ಳುವುದು ಬೇಡವೆಂದು ಎಲ್ಲವನ್ನೂ ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.