ಬೆಂಗಳೂರು: ಇಂದಿರಾ ಕ್ಯಾಂಟೀನ್ನಲ್ಲಿ ಅವ್ಯವಹಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಾಜಿ ಸಚಿವ ಕೆ.ಜೆ.ಜಾರ್ಜ್ ಅವರಿಗೆ ಇಂದು ಲೋಕಾಯುಕ್ತ ಕ್ಲೀನ್ ಚಿಟ್ ನೀಡಿದೆ.
ಇಂದಿರಾ ಕ್ಯಾಂಟೀನ್ ಸ್ಥಾಪನೆಯಾದಾಗ ಹಾಗೂ ನಂತರ ಆಹಾರ ಪೂರೈಕೆಯಲ್ಲಿ ಸಿದ್ದರಾಮಯ್ಯ ಹಾಗೂ ಕೆ.ಜೆ.ಜಾರ್ಜ್ ಸೇರಿದಂತೆ ಇನ್ನಿತರರು ಅವ್ಯವಹಾರ ನಡೆಸಿದ್ದಾರೆಂದು ಗಣೇಶ್ ಸಿಂಗ್ ಎಂಬುವರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು.