ಕರ್ನಾಟಕ

karnataka

ETV Bharat / state

ಇತಿಹಾಸ ತಿರುಚಲು ಹೊರಟಿರುವ ಬಿಜೆಪಿಗೆ ಅವಕಾಶ ಮಾಡಿಕೊಡಬೇಡಿ: ದಿನೇಶ್ ಗುಂಡೂರಾವ್ - ಸರ್ದಾರ್ ಪಟೇಲ್

ಇಂದು ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಪ್ರಧಾನಿ ದಿ. ಇಂದಿರಾಗಾಂಧಿ ಅವರ 35ನೇ ಪುಣ್ಯ ಸ್ಮರಣೆ ಹಾಗೂ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ಈ ವೇಳೆ ಮಾತನಾಡಿದ ಕಾಂಗ್ರೆಸ್​ ನಾಯಕರು ಬಿಜೆಪಿ ಇತಿಹಾಸ ತಿರುಚಲು ಹೊರಟಿದೆ ಅದಕ್ಕೆ ಅವಕಾಶ ನೀಡಬಾರದು ಎಂದು ಕರೆ ನೀಡಿದರು.

ಕೆಪಿಸಿಸಿ ಕಚೇರಿ

By

Published : Oct 31, 2019, 5:51 PM IST

ಬೆಂಗಳೂರು: ದೇಶದಲ್ಲಿ ಹೊಸ ಚಿಂತನೆ ಮೂಲಕ ಎಲ್ಲರಿಗೂ ಅಧಿಕಾರ ನೀಡುವ ಹಾಗೂ ಬಡವರಿಗೆ ಉತ್ತಮ ಬದುಕು ಕಲ್ಪಿಸುವ ಮಹತ್ತರ ಕಾರ್ಯವನ್ನು ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು ಜಾರಿಗೆ ತಂದಿದ್ದರು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸ್ಮರಿಸಿದರು.

ಕೆಪಿಸಿಸಿ ಕಚೇರಿಯಲ್ಲಿ ಇಂದಿರಾ ಗಾಂಧಿ ಪುಣ್ಯಸ್ಮರಣೆ ಹಾಗೂ ವಲ್ಲಭ ಭಾಯಿ ಪಟೇಲರ ಜನ್ಮದಿನಾಚರಣೆ

ನಗರದ ಕೆಪಿಸಿಸಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ 35ನೇ ಪುಣ್ಯ ಸ್ಮರಣೆ ಹಾಗೂ ಸರ್ದಾರ್ ವಲ್ಲಭ ಬಾಯಿ ಪಟೇಲ್ ಅವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇಂದಿರಾ ಗಾಂಧಿ ಪ್ರಭಾವಿಗಳಿಂದ ಅಧಿಕಾರ ಕಿತ್ತು, ಸರ್ವರಿಗೂ ಅಧಿಕಾರ ಸಿಗುವಂತೆ ಮಾಡಿದ್ದರು. ಸರ್ಕಾರ ಎಲ್ಲ ಜನರ ಪರವಾಗಿದೆ ಎಂಬ ಭಾವನೆ ಮೂಡಿಸಿ ಇಂದಿಗೂ ಕಾಂಗ್ರೆಸ್ ಎಂದರೆ ಹೆಮ್ಮೆ ಪಡುವ ಭಾವನೆಯನ್ನು ಮೂಡಿಸಿದ್ದರು. ಅವರು ಜೀವವನ್ನೇ ದೇಶಕ್ಕಾಗಿ ತ್ಯಾಗ ಮಾಡಿದ ಮಹಾನ್ ಮಹಿಳೆ ಎಂದು ಗುಂಡೂರಾವ್​​ ಬಣ್ಣಿಸಿದರು.

ನೆಹರೂ-ಪಟೇಲ್ ನಡುವೆ ಕೆಲ ಭಿನ್ನಾಭಿಪ್ರಾಯಗಳು ಇದ್ದವು. ಅವೆಲ್ಲದರ ಬಗ್ಗೆ ಇಬ್ಬರು ಪತ್ರ ವ್ಯವಹಾರ ಮಾಡಿಕೊಂಡಿದ್ದರೂ ಸಹ ದ್ವೇಷಭಾವನೆ ಹೊಂದಿರಲಿಲ್ಲ. ಇಂದು ಇತಿಹಾಸ ತಿರುಚುವ ಕಾರ್ಯ ಆಗುತ್ತಿದೆ. ನೆಹರೂ, ಪಟೇಲ್ ಇಬ್ಬರೂ ದೊಡ್ಡ ನಾಯಕರು. ಆದ್ರೆ ಬಿಜೆಪಿ ಇತಿಹಾಸ ತಿರುಚಲು ಹೊರಟಿದ್ದು, ಅದಕ್ಕೆ ಅವಕಾಶ ಮಾಡಿಕೊಡಬೇಡಿ ಎಂದು ಕೆಪಿಸಿಸಿ ಅಧ್ಯಕ್ಷರು ರಾಜ್ಯದ ಜನತೆಗೆ ಮನವಿ ಮಾಡಿದ್ರು.

ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಮಾತನಾಡಿ, ಮಾಜಿ ಪ್ರಧಾನಿ ಇಂದಿರಾಗಾಂಧಿ ಹಾಗೂ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರು ದೇಶಕ್ಕೆ ನೀಡಿದ ಕೊಡುಗೆ ದೊಡ್ಡದು. ಅವರು ಪ್ರಧಾನಿ ಆಗಿದ್ದ ಸಂದರ್ಭ ನಾವು ಯುವ ನಾಯಕರಾಗಿ ಕಾರ್ಯನಿರ್ವಹಿಸಿದ್ದೆವು. ಕಾಂಗ್ರೆಸ್ ಪಕ್ಷದ ಮೂಲ ನಾಯಕರ ಚಿಂತನೆ ಅಳವಡಿಸಿಕೊಳ್ಳುವ ಅಗತ್ಯವಿದೆ. ನಮ್ಮ ಪಕ್ಷ ಅಧಿಕಾರದಲ್ಲಿ ಇಲ್ಲ ಎಂದು ಬೇಸರ ಪಟ್ಟುಕೊಳ್ಳುವುದು ಬೇಡ. ಪ್ರಾಮಾಣಿಕವಾಗಿ ಪಕ್ಷಕ್ಕಾಗಿ ಕೆಲಸ ಮಾಡೋಣ ಎಂದರು.

ಕಾರ್ಯಕ್ರಮದಲ್ಲಿ ಮಾಜಿ ಕೇಂದ್ರ ಸಚಿವ ಡಾ. ಎಂ. ವೀರಪ್ಪ ಮೊಯ್ಲಿ, ರಾಜ್ಯಸಭೆ ಸದಸ್ಯ ಬಿ.ಕೆ. ಹರಿಪ್ರಸಾದ್, ಮಾಜಿ ಸಚಿವರಾದ ಹೆಚ್.ಎಂ. ರೇವಣ್ಣ, ಹೆಚ್. ಆಂಜನೇಯ, ಮೋಟಮ್ಮ, ಮುಖಂಡರಾದ ಬಿ.ಎಲ್. ಶಂಕರ್ ಹಾಗೂ ಇತರ ಮುಖಂಡರು ಭಾಗವಹಿಸಿದ್ದರು. ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಅವರ ಅನುಪಸ್ಥಿತಿ ಕಾರ್ಯಕ್ರಮದಲ್ಲಿ ಎದ್ದು ಕಾಣುತ್ತಿತ್ತು.

ABOUT THE AUTHOR

...view details