ಬೆಂಗಳೂರು:ತುಮಕೂರಿನಲ್ಲಿ ಕೈಗಾರಿಕಾ ಕಾರಿಡಾರ್ ನಿರ್ಮಿಸಬೇಕೆಂಬ ಕೈಗಾರಿಕೆ ಮತ್ತು ಆಂತರಿಕ ವ್ಯಾಪಾರ ಉತ್ತೇಜನ ಇಲಾಖೆ (ಡಿಪಿಐಐಟಿ)ಯ ಪ್ರಸ್ತಾವನೆಯನ್ನು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಆರ್ಥಿಕ ವ್ಯವಹಾರಗಳ ಸಂಪುಟ ಸಭೆ ಅಂಗೀಕರಿಸಿದ್ದಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಪ್ರಧಾನಿ ನರೇಂದ್ರ ಮೋದಿಗೆ ಪತ್ರದ ಮುಖೇನ ಧನ್ಯವಾದ ಹೇಳಿದ್ದಾರೆ.
ತುಮಕೂರಿನಲ್ಲಿ ಕೈಗಾರಿಕಾ ಕಾರಿಡಾರ್: ಪ್ರಧಾನಿಗೆ ಧನ್ಯವಾದ ತಿಳಿಸಿದ ಶೆಟ್ಟರ್ - ಪ್ರಧಾನಿಗೆ ಪತ್ರ ಮುಖೇನ ಧನ್ಯವಾದ ತಿಳಿಸಿದ ಶೆಟ್ಟರ್
ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಆರ್ಥಿಕ ವ್ಯವಹಾರಗಳ ಸಂಪುಟ ಸಭೆಯಲ್ಲಿ ತುಮಕೂರಿನಲ್ಲಿ ಕೈಗಾರಿಕಾ ನೋಡ್ ನಿರ್ಮಾಣಕ್ಕೆ ಒಪ್ಪಿಗೆ ನೀಡಿದ ಹಿನ್ನೆಲೆ, ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಪತ್ರ ಮುಖೇನ ಪ್ರಧಾನಿ ಮೋದಿಗೆ ಧನ್ಯವಾದ ಅರ್ಪಿಸಿದ್ದಾರೆ.

ಸಂಗ್ರಹ ಚಿತ್ರ
ತುಮಕೂರು ನೋಡ್ ಸ್ಥಾಪನೆಗೆ ರಾಜ್ಯ ಸರ್ಕಾರದ ವತಿಯಿಂದ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದ್ದು, ಬೆಂಗಳೂರಿಗೆ ಬಹಳ ಸಮೀಪವಿರುವ ತುಮಕೂರು, ಕೈಗಾರಿಕಾ ನೋಡ್ ಸ್ಥಾಪನೆಗೆ ಉತ್ತಮ ಸಾಮರ್ಥ್ಯ ಹೊಂದಿದೆ. ಹೀಗಾಗಿ ಅತೀ ಹೆಚ್ಚು ವಿದೇಶಿ ಬಂಡವಾಳ ಆಕರ್ಷಣೆಯಾಗುತ್ತದೆ. ತೈವಾನ್ ಹಾಗೂ ಜಪಾನ್ನಿಂದ ಈಗಾಗಲೇ ಬೃಹತ್ ಕೈಗಾರಿಕಾ ಪಾರ್ಕ್ನಲ್ಲಿ ಬಂಡವಾಳ ಬಂದಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ಆತ್ಮನಿರ್ಭರ್ ಭಾರತಕ್ಕೆ ಈ ಪಾರ್ಕ್ ಹೆಚ್ಚಿನ ಸಹಕಾರ ನೀಡಲಿದ್ದು, ₹1701.81 ಕೋಟಿ ರೂ.ಗಳನ್ನು ಮೀಸಲಿಡುವುದಾಗಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.