ಬೆಂಗಳೂರು:ನಗರದಲ್ಲಿ ಜಾರಿಯಾಗಿರುವ ಲಾಕ್ಡೌನ್ ಸಂದರ್ಭದಲ್ಲಿ ಕೈಗಾರಿಕೆಗಳು ಕಾರ್ಯ ನಿರ್ವಹಿಸಬಹುದು ಎಂಬ ಸರ್ಕಾರದ ಆದೇಶಕ್ಕೆ ಉದ್ದಿಮೆದಾರರು ಸ್ವಾಗತ ಕೋರಿದ್ದಾರೆ.
ಲಾಕ್ಡೌನ್ ವೇಳೆ ಕೈಗಾರಿಕೆಗಳಿಗೆ ಅವಕಾಶ: ಸರ್ಕಾರದ ನಿರ್ಧಾರ ಸ್ವಾಗತಿಸಿದ ಉದ್ದಿಮೆದಾರರು - Businessmen Welcomed Government Decision
ಒಂದು ವಾರಗಳ ಅವಧಿಯ ಬೆಂಗಳೂರು ಲಾಕ್ಡೌನ್ ಸಂದರ್ಭದಲ್ಲಿ ಕೈಗಾರಿಕೆಗಳು ಕಾರ್ಯ ನಿರ್ವಹಿಸಲು ಸಮ್ಮತಿ ನೀಡಿರುವ ಸರ್ಕಾರದ ನಿರ್ಧಾರಕ್ಕೆ ಉದ್ದಿಮೆದಾರರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಲಾಕ್ಡೌನ್ ವಿರೋಧಿಸಿ 30ಕ್ಕೂ ಹೆಚ್ಚು ಕೈಗಾರಿಕಾ ಹಾಗೂ ವಾಣಿಜ್ಯ ಸಂಘ-ಸಂಸ್ಥೆಗಳು ಪತ್ರಿಕಾಗೋಷ್ಠಿ ನಡೆಸಿದ್ದರು. ಇವರ ಅಭಿಪ್ರಾಯದ ಮೇರೆಗೆ ಸರ್ಕಾರ ಲಾಕ್ಡೌನ್ ಸಂದರ್ಭದಲ್ಲಿ ಕೈಗಾರಿಕೆಗಳು ಕಾರ್ಯನಿರ್ವಹಿಸಬಹುದು ಎಂದು ಆದೇಶಿಸಿದೆ. ಮುಂಜಾಗ್ರತಾ ಕ್ರಮವನ್ನು ಕೈಗೊಂಡು ಎಲ್ಲಾ ಕಾರ್ಖಾನೆಗಳು ಎಂದಿನಂತೆ ಕಾರ್ಯನಿರ್ವಹಿಸಲು ಸರ್ಕಾರ ಸಮ್ಮತಿ ನೀಡಿದ್ದಕ್ಕೆ ಕಾಸಿಯಾ ಅಧ್ಯಕ್ಷ ಕೆ.ಬಿ. ಅರಸಪ್ಪ ಸ್ವಾಗತಿಸಿದ್ದಾರೆ.
ಈ ಸಂದರ್ಭದಲ್ಲಿ ಕೈಗಾರಿಕೆಗಳಿಗೆ ನಿರ್ಬಂಧ ಹೇರಿದ್ದರೆ, ಬಂದಂತಹ ಆರ್ಡರ್ ಬೇರೆ ರಾಜ್ಯಗಳಿಗೆ ಹೋಗುವ ಸಾಧ್ಯತೆ ಹೆಚ್ಚಿತ್ತು ಎಂದು ಕೈಗಾರಿಕೋದ್ಯಮಿಗಳು ಅಭಿಪ್ರಾಯಪಟ್ಟಿದ್ದರು.