ಬೆಂಗಳೂರು:ಚುನಾವಣಾ ನಾಮಪತ್ರದಲ್ಲಿ ಆಸ್ತಿ ಬಗ್ಗೆ ಸುಳ್ಳು ಮಾಹಿತಿ ನೀಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು 4 ವಾರಗಳ ಸಮಯಾವಕಾಶ ಲೋಕಸಭಾ ಸದಸ್ಯ ಪ್ರಜ್ವಲ್ ರೇವಣ್ಣ ಪರ ವಕೀಲರು ಕೇಳಿದ್ದಾರೆ. ಆದರೆ ನ್ಯಾಯಾಲಯ ಇದನ್ನ ತಿರಸ್ಕಾರ ಮಾಡಿದೆ.
ಆಸ್ತಿ ವಿವರದಲ್ಲಿ ತಪ್ಪು ಮಾಹಿತಿ ನೀಡಿ ಸಂಸದರಾಗಿ ಆಯ್ಕೆಯಾಗಿರುವ ಪ್ರಜ್ವಲ್ ರೇವಣ್ಣ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಲು ಕೋರಿ ಪರಾಜಿತ ಬಿಜೆಪಿ ಅಭ್ಯರ್ಥಿ ಮಾಜಿ ಸಚಿವ ಎ. ಮಂಜು ಸಲ್ಲಿಸಿರುವ ಚುನಾವಣಾ ತಕರಾರು ಅರ್ಜಿ ವಿಚಾರಣೆ ಇಂದು ಏಕಸದಸ್ಯ ಪೀಠದಲ್ಲಿ ನಡೆಯಿತು. ಈ ವೇಳೆ ಪ್ರಜ್ವಲ್ ರೇವಣ್ಣ ಪರ ವಕೀಲರು ಆಕ್ಷೇಪಣೆ ಸಲ್ಲಿಕೆ ಮಾಡಲು 4 ವಾರಗಳ ಕಾಲ ಸಮಾಯಾವಕಾಶ ಕೇಳಿದರು. ಮನವಿ ನಿರಾಕರಿಸಿದ ನ್ಯಾಯಾಲಯ ಅಕ್ಟೋಬರ್ 18ಕ್ಕೆ ಆಕ್ಷೇಪಣೆ ಸಲ್ಲಿಕೆ ಮಾಡುವಂತೆ ಸೂಚಿಸಿ ವಿಚಾರಣೆ ಮುಂದೂಡಿದೆ.
ಪತ್ರಿಕೆ ಜಾಹೀರಾತು ಮೂಲಕ ಹೊರಡಿಸಿದ ಸಮನ್ಸ್ ಸ್ವೀಕಾರ ಮಾಡಿದ ಪ್ರಜ್ವಲ್ ರೇವಣ್ಣ ಕಳೆದ ವಾರ ವಕೀಲರ ಮೂಲಕ ನೋಟಿಸ್ ಸ್ವೀಕರಿಸಿದ್ದಾಗಿ ನ್ಯಾಯಾಲಯಕ್ಕೆ ತಿಳಿಸಿದ್ದರು.