ಬೆಂಗಳೂರು: ವಿಧಾನಸೌಧ ಸೆಕ್ಯೂರಿಟಿ ಕರ್ತವ್ಯದಲ್ಲಿದ್ದ ಇನ್ಸ್ಪೆಕ್ಟರ್ ಧನಂಜಯ್ ಕರ್ತವ್ಯದ್ದಲ್ಲಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.
ಮೂಳೆ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಇನ್ಸ್ಪೆಕ್ಟರ್ ಧನಂಜಯ್ ಕಳೆದ ಒಂದು ವರ್ಷದಿಂದ ಕ್ಯಾನ್ಸರ್ಗೆ ಚಿಕಿತ್ಸೆ ಪಡೆಯುತ್ತಿದ್ದರು.
ಒಂದು ವಾರದ ಹಿಂದೆ ಡ್ಯೂಟಿಗೆ ಬಂದಿದ್ದ ಅವರು ಇಂದು ಕರ್ತವ್ಯದ ವೇಳೆ ಕುಸಿದು ಬಿದ್ದಿದ್ದಾರೆ. ಕೂಡಲೇ ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಿ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೇ ಇನ್ಸ್ಪೆಕ್ಟರ್ ಧನಂಜಯ್ ಮೃತಪಟ್ಟಿದ್ದಾರೆ.