ಕರ್ನಾಟಕ

karnataka

ETV Bharat / state

ಗಲಭೆ ಪ್ರಕರಣದಲ್ಲಿ ಗುಪ್ತಚರ ಇಲಾಖೆಯ ವೈಫಲ್ಯವಿದೆ: ಡಿ.ಕೆ.ಸುರೇಶ್ - ಸಂಸದ ಡಿಕೆ ಸುರೇಶ್ ಲೇಟೆಸ್ಟ್​ ನ್ಯೂಸ್​

ಬೆಂಗಳೂರು ಗಲಭೆ ಪ್ರಕರಣದಲ್ಲಿ ಗುಪ್ತಚರ ಇಲಾಖೆಯ ವೈಫಲ್ಯವಿದೆ ಅನ್ನೋದನ್ನು ಸರ್ಕಾರ ಒಪ್ಪಿಕೊಳ್ಳಬೇಕು ಎಂದು ಸಂಸದ ಡಿ.ಕೆ.ಸುರೇಶ್ ಹೇಳಿದ್ದಾರೆ.

MP DK Suresh
ಸಂಸದ ಡಿ.ಕೆ ಸುರೇಶ್

By

Published : Aug 23, 2020, 2:56 PM IST

ಬೆಂಗಳೂರು: ನಗರದ ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆ ಪ್ರಕರಣದಲ್ಲಿ ಸರ್ಕಾರದ ಗುಪ್ತಚರ ಇಲಾಖೆಯ ವೈಫಲ್ಯ ಎದ್ದು ಕಾಣುತ್ತಿದೆ ಎಂದು ಸಂಸದ ಡಿ.ಕೆ. ಸುರೇಶ್ ಅಭಿಪ್ರಾಯಪಟ್ಟಿದ್ದಾರೆ.

ಸದಾಶಿವನಗರದಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಲಭೆ ಪ್ರಕರಣದಲ್ಲಿ ಇಂಟೆಲಿಜೆನ್ಸ್ ವೈಫಲ್ಯವಿದೆ. ಇದನ್ನು ಸರ್ಕಾರ ಒಪ್ಪಿಕೊಳ್ಳಬೇಕು. ಅದನ್ನು ಬಿಟ್ಟು ಪ್ರಕರಣವನ್ನು ಮುಚ್ಚಿ ಹಾಕೋಕೆ ಕಾಂಗ್ರೆಸ್ ಮೇಲೆ ಗೂಬೆ ಕೂರಿಸೋ ಕೆಲಸ ನಡೆಯುತ್ತಿದೆ ಎಂದರು.

ಡಿಕೆಶಿ ಫೋನ್ ಟ್ಯಾಪಿಂಗ್ ವಿಚಾರ ಮಾತನಾಡಿದ ಅವರು, ಫೋನ್ ಟ್ಯಾಪಿಂಗ್ ಆರೋಪವಲ್ಲ, ಸತ್ಯ. ಕಳೆದ 15 ದಿನಗಳಿಂದ ಡಿಸ್ಟರ್ಬೆನ್ಸ್ ಬರ್ತಿದೆ. ಕೆಲವರು ದೂರು ಕೊಡುವಂತೆ ಹೇಳಿದ್ದರು. ಅದಕ್ಕೆ ಈಗ ದೂರು ಕೊಟ್ಟಿದ್ದಾರೆ. ಬಿಜೆಪಿಯವರು ಇದರಲ್ಲಿ ಎಕ್ಸ್‌ಪರ್ಟ್. ಒಂದು ಪಕ್ಷದ ಅಧ್ಯಕ್ಷರು ಇದನ್ನು ಲಘುವಾಗಿ ಪರಿಗಣಿಸೋಕೆ ಸಾಧ್ಯವಿಲ್ಲ. ವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಹಗರಣ ಮಾಡೋಕೆ ಅವಕಾಶವಿಲ್ಲ. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಹೇಳಿದರು.

ಡಿ.ಜೆ.ಹಳ್ಳಿ ಪ್ರಕರಣಕ್ಕೂ ಟ್ಯಾಪಿಂಗ್ ಸಂಬಂಧವಿಲ್ಲ. ಗಲಭೆ ಕೇಸ್‌ ಮುಚ್ಚಿ ಹಾಕೋಕೆ ಪ್ರಯತ್ನ ನಡೆಸ್ತಿದ್ದಾರೆ. ಆದರೆ ವಾಸ್ತವಾಂಶವೇ ಬೇರೆ. ಬಿಬಿಎಂಪಿ‌ ಚುನಾವಣೆಗಳು ಬರ್ತಿವೆ. ಅದಕ್ಕೆ ಇಲ್ಲಿನ ಬಿಜೆಪಿ ನಾಯಕರು ಈ ರೀತಿ ಮಾಡ್ತಿದ್ದಾರೆ. ಅದಕ್ಕೆ ಪೊಲೀಸರ ಮೇಲೆ ಒತ್ತಡ ತರುತ್ತಿದ್ದಾರೆ. ಈಗ ಈ ಪ್ರಕರಣವನ್ನು ಚುನಾವಣೆಗೆ ಬಳಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.

ABOUT THE AUTHOR

...view details