ಕರ್ನಾಟಕ

karnataka

ETV Bharat / state

ಕೆಪಿಸಿಸಿ ಅಧ್ಯಕ್ಷರಾಗಿರುವುದಕ್ಕಾಗಿ ಕಿರುಕುಳ, ಚುನಾವಣೆಯಲ್ಲಿ ತೊಂದರೆ ಕೊಡಲು ಪಿತೂರಿ: ಹೈಕೋರ್ಟ್​ನಲ್ಲಿ ವಾದ

ಶಿವಕುಮಾರ್ ವಿರುದ್ಧ ರಾಜಕೀಯ ಪಿತೂರಿ ನಡೆಯುತ್ತಿದೆ. ಜೊತೆಗೆ ಚುನಾವಣೆ ಹಿನ್ನೆಲೆ ತೊಂದರೆ ನೀಡಬೇಕು ಎಂಬ ಉದ್ದೇಶದಿಂದ ಈ ರೀತಿ ನಡೆಸಿಕೊಳ್ಳಲಾಗುತ್ತಿದೆ ಎಂದು ಹೈಕೋರ್ಟ್​ನಲ್ಲಿ ಡಿ ಕೆ ಶಿವಕುಮಾರ್ ಪರ ವಕೀಲರು ವಾದ ಮಂಡಿಸಿದರು.

ಡಿಕೆಶಿ
ಡಿಕೆಶಿ

By

Published : Nov 19, 2022, 8:44 PM IST

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾಗಿರುವುದರಿಂದ ಕಿರುಕುಳ ನೀಡಲಾಗುತ್ತಿದ್ದು, ರಾಜಕೀಯ ಪಿತೂರಿ ನಡೆಯುತ್ತಿದೆ. ವಿಧಾನಸಭಾ ಚುನಾವಣೆಯಲ್ಲಿ ತೊಂದರೆ ನೀಡಬೇಕು ಎಂಬ ಉದ್ದೇಶದಿಂದ ಈ ರೀತಿಯಲ್ಲಿ ನಡೆಸಿಕೊಳ್ಳಲಾಗುತ್ತಿದೆ ಎಂದು ಡಿ.ಕೆ.ಶಿವಕುಮಾರ್ ಪರ ವಕೀಲರು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ್ದಾರೆ.

ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಸಿಬಿಐ 2020ರ ಅಕ್ಟೋಬರ್ 3ರಂದು ಎಫ್ಐಆರ್​ ದಾಖಲಿಸಿತ್ತು. ಇದನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಶಿವಕುಮಾರ್‌ ಅರ್ಜಿ ಸಲ್ಲಿಸಿದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಸುನಿಲ್ ದತ್‌ ಯಾದವ್‌ ಅವರಿದ್ದ ಧಾರವಾಡ ಪೀಠಕ್ಕೆ ಡಿಕೆಶಿ ಪರ ವಕೀಲರು ತಮ್ಮ ವಾದಲ್ಲಿ ವಿವರಿಸಿದರು.

ಅಲ್ಲದೆ, ಅರ್ಜಿದಾರರು ಸಾರ್ವಜನಿಕ ಸೇವಕರಾಗಿದ್ದಾರೆ. ಅವರ ವಿರುದ್ಧ ದಾಖಲಿಸಿರುವ ಈ ಪ್ರಕರಣದಲ್ಲಿ ಅವರ ಕುಟುಂಬದ ಸದಸ್ಯರ ಆದಾಯ ಪರಿಗಣಿಸಲಾಗಿದೆ. ಜಾಮೀನು ದೊರೆತ ನಂತರ ಜಾರಿ ನಿರ್ದೇಶನಾಲಯದ ಮಾಹಿತಿ ಅನುಸಾರ ಸಿಬಿಐ ಪ್ರಕರಣ ದಾಖಲಿಸಲಾಗಿದೆ. ಇದು ಅರ್ಜಿದಾರರಿಗೆ ಕಿರುಕುಳ ನೀಡುವ ಉದ್ದೇಶವಾಗಿದ್ದು, ದುರುದ್ದೇಶಪೂರಿತ ಕ್ರಮವಾಗಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು.

ಶಿವಕುಮಾರ್​ ಮನೆಯಲ್ಲಿ 41 ಲಕ್ಷ ದೊರೆತಿದೆ ಎಂಬ ಆರೋಪದಲ್ಲಿ ಜಾರಿ ನಿರ್ದೇಶನಾಲಯ ಎರಡು ಪ್ರಕರಣ ದಾಖಲಿಸಿದೆ. ಜೊತೆಗೆ, ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಮತ್ತೊಂದು ಪ್ರಕರಣ, ಆದಾಯ ತೆರಿಗೆ ವಂಚನೆ ಆರೋಪದಲ್ಲಿ ನಾಲ್ಕು ಪ್ರಕರಣಗಳನ್ನು ದಾಖಲಿಸಲಾಗಿದೆ. ಈ ಪ್ರಕರಣವನ್ನು ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ ರದ್ದು ಪಡಿಸಿತ್ತು. ಬಳಿಕ ಹೈಕೋರ್ಟ್‌ ಕೂಡಾ ಎತ್ತಿ ಹಿಡಿದಿತ್ತು. ಇದೀಗ ಈ ಆದೇಶವನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲಾಗಿದೆ ಎಂದು ನ್ಯಾಯಾಲಯಕ್ಕೆ ವಿವರಣೆ ನೀಡಿದರು.

(ಓದಿ: ಪ್ರಧಾನಿ ಅವರ ಕೊಡುಗೆ ಕೇವಲ ರಾಜ್ಯಕ್ಕೆ ಮಾಲಾರ್ಪಣೆ ಮಾಡೋದಷ್ಟೇ: ಡಿಕೆ ಶಿವಕುಮಾರ್ ವ್ಯಂಗ್ಯ​)

ABOUT THE AUTHOR

...view details