ಬೆಂಗಳೂರು:ನಾಲ್ಕು ಲಕ್ಷ ಮಹಿಳೆಯರಿಗೆ ಉದ್ಯೋಗ ನೀಡಲು ಯೋಜನೆ ರೂಪಿಸಲಾಗಿದ್ದು, ಈ ಬಗ್ಗೆ ಬಜೆಟ್ ನಲ್ಲಿ ಘೋಷಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ನಗರದ ಮಹಾಲಕ್ಷ್ಮಿ ಲೇಔಟ್ ಶಂಕರಮಠ ಬಡಾವಣೆಯಲ್ಲಿ ಮಹಾಲಕ್ಷ್ಮೀ ಎಜುಕೇಷನಲ್ ಟ್ರಸ್ಟ್ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಹೆಣ್ಣಿಲ್ಲದೆ ಈ ಜಗತ್ತು ಇಲ್ಲ. ಇಂದು ಎಲ್ಲಾ ರಂಗದಲ್ಲಿ ಮಹಿಳೆಯರಿದ್ದಾರೆ. ಮುಂದಿನ ದಿನಗಳಲ್ಲಿ ಮಹಿಳೆಯರು ಎಲ್ಲಾ ರಂಗದಲ್ಲಿ ಮುಂಚೂಣಿಯಲ್ಲಿರಲಿದ್ದಾರೆ ಎಂದರು.
ಮಹಿಳೆಯರನ್ನು ಸಬಲೀಕರಣಗೊಳಿಸುವ ಉದ್ದೇಶದಿಂದ ರಾಜ್ಯದ ಎಲ್ಲಾ ಮಹಿಳಾ ಸಂಘಕ್ಕೆ 1.50 ಲಕ್ಷ ರೂ. ಸಹಾಯಧನ ನೀಡಲಾಗುವುದು. ಒಟ್ಟು 41 ಸಾವಿರ ಕೋಟಿ ರೂ. ಗಳನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣಕ್ಕಾಗಿ ಮೀಸಲಿಡಲಾಗಿದ್ದು, ಮಹಿಳೆಯರು ಮತ್ತು ಮಕ್ಕಳ ಆರೋಗ್ಯ, ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಲಾಗಿದೆ. ಬಜೆಟ್ ನ ಪ್ರಯೋಜನವನ್ನು ಸರಿಯಾಗಿ ಬಳಸುವುದರಿಂದ ರಾಜ್ಯದ ಆರ್ಥಿಕತೆಯನ್ನು ಸಬಲತೆಯ ಕಡೆಗೆ ಕೊಂಡೊಯ್ಯಬಹುದು ಎಂದು ಸಿಎಂ ಹೇಳಿದರು.
ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಸಿ ಎಂ ಬಸವರಾಜ ಬೊಮ್ಮಾಯಿ ಮಾತನಾಡುತ್ತಿರುವುದು.. ಕಾರ್ಯಕ್ರಮದಲ್ಲಿ ಸಚಿವರಾದ ಕೆ. ಗೋಪಾಲಯ್ಯ, ಆನಂದ್ ಸಿಂಗ್, ಶಶಿಕಲಾ ಜೊಲ್ಲೆ, ಮಾಜಿ ಉಪಮೇಯರ್ ಹೇಮಲತಾ ಗೋಪಾಲಯ್ಯ, ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ತಾರಾ ಅನುರಾಧ, ಬಿಜೆಪಿ ನಾಯಕ ನೆ.ಲ.ನರೇಂದ್ರ ಬಾಬು, ಮಹಾಲಕ್ಷ್ಮೀ ಎಜುಕೇಷನ್ ಟ್ರಸ್ಟ್ ಅಧ್ಯಕ್ಷ ಜಯರಾಮಯ್ಯ, ಹರೀಶ್ ಮತ್ತಿತರರು ಉಪಸ್ಥಿತರಿದ್ದರು.
ಓದಿ :Punjab Result: ಅಧಿಕಾರಕ್ಕೆ ಬೇಕಿರುವುದು 59 ಸ್ಥಾನ!, 87 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ ಆಪ್