ಕರ್ನಾಟಕ

karnataka

ETV Bharat / state

ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮಾರ್ಗದ ಮೆಟ್ರೋ ರೈಲು ಕಾಮಗಾರಿ ಚುರುಕು - International airport road metro construction work in banglore

ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮಾರ್ಗದ ಮೆಟ್ರೋ ರೈಲು ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸಲು ಬೆಂಗಳೂರು ಮೆಟ್ರೋ ರೈಲು ನಿಗಮ ಮುಂದಾಗಿದೆ.

international-airport-road-metro-construction-work-in-banglore
ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮಾರ್ಗದ ಮೆಟ್ರೋ ರೈಲು ಕಾಮಗಾರಿ ಚುರುಕು

By

Published : Jun 22, 2022, 5:26 PM IST

ಬೆಂಗಳೂರು:ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮಾರ್ಗದ ಮೆಟ್ರೋ ರೈಲು ಕಾಮಗಾರಿ ಚುರುಕುಗೊಂಡಿದ್ದು, ಶೀಘ್ರ ಕಾಮಗಾರಿ ಪೂರ್ಣಗೊಳಿಸಲು ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್‌) ಮುಂದಾಗಿದೆ. ಚಿಕ್ಕಜಾಲ ಬಳಿ ಮೊದಲ ಪಿಲ್ಲರ್‌ ನಿರ್ಮಾಣ ಕಾಮಗಾರಿಯನ್ನು ಪ್ರಾರಂಭಿಸಲಾಗಿದ್ದು, ಪಿಲ್ಲರ್‌ ಮೇಲೆ ಅಳವಡಿಸುವ 'ಯು' ಆಕಾರದ ಗರ್ಡರ್‌ ನಿರ್ಮಾಣ ಕಾಮಗಾರಿಯನ್ನು ಸದ್ಯ ಕೈಗೆತ್ತಿಕೊಳ್ಳಲಾಗಿದೆ.

ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮಾರ್ಗದ ಮೆಟ್ರೋ ರೈಲು ಕಾಮಗಾರಿ ಚುರುಕು

ಕೆ.ಆರ್‌.ಪುರ- ಹೆಬ್ಬಾಳ ಮಾರ್ಗದ ಮೂಲಕ ವಿಮಾನ ನಿಲ್ದಾಣವನ್ನು ಸಂಪರ್ಕಿಸುವ 36 ಕಿಲೋ ಮೀಟರ್​ ಉದ್ದದ ಸಿವಿಲ್‌ ಕಾಮಗಾರಿಯನ್ನು ಮೂರು ಪ್ಯಾಕೇಜ್‌ಗಳಾಗಿ ವಿಂಗಡಿಸಲಾಗಿದೆ. ಪ್ಯಾಕೇಜ್‌ಗಳ ಗುತ್ತಿಗೆಗಳನ್ನು ನಾಗಾರ್ಜುನ ಕನ್ಸ್‌ಟ್ರಕ್ಷನ್‌ ಕಂಪನಿ (ಎನ್‌ಸಿಸಿ) ಪಡೆದುಕೊಂಡಿದೆ ಎಂದು ಬಿ.ಎಂ.ಆರ್.ಸಿ.ಎಲ್ ಮ್ಯಾನೇಜಿಂಗ್​ ಡೈರೆಕ್ಟರ್​ ಅಂಜುಂ ಪರ್ವೇಜ್ ತಿಳಿಸಿದ್ದಾರೆ.

ಇಲ್ಲಿನ ಮೆಟ್ರೋ ನಿಲ್ದಾಣಗಳಿಗೆ ಅಗತ್ಯವಿರುವ 2.23 ಲಕ್ಷ ಚದರ್​ ಮೀಟರ್‌ ಜಾಗದ ಪೈಕಿ 2.15 ಲಕ್ಷ ಚದರ್​ ಮೀಟರ್‌ ಸ್ವಾಧೀನ ಪ್ರಕ್ರಿಯೆ ಈಗಾಗಲೇ ಪೂರ್ಣಗೊಂಡಿದೆ. ಕೆ.ಆರ್‌.ಪುರದಿಂದ ಹೆಬ್ಬಾಳದವರೆಗಿನ ಮಾರ್ಗದಲ್ಲಿ ಮರಗಳ ಸ್ಥಳಾಂತರ ಆಗಬೇಕಿರುವುದರಿಂದ ಕಾಮಗಾರಿ ವಿಳಂಬವಾಗಿದೆ. ಹೆಬ್ಬಾಳದಿಂದ ವಿಮಾನ ನಿಲ್ದಾಣ ಮೆಟ್ರೋ ಕಾಮಗಾರಿ ವೇಗವಾಗಿ ನಡೆಯುತ್ತಿದೆ ಎಂದು ಹೇಳಿದ್ದಾರೆ.

ಟಿನ್‌ ಫ್ಯಾಕ್ಟರಿ ಬಳಿ ಉಕ್ಕಿನ ಗರ್ಡರ್‌ ಅಳವಡಿಕೆ : ಟಿನ್‌ ಫ್ಯಾಕ್ಟರಿ ಬಳಿ ಉಕ್ಕಿನ ಗರ್ಡರ್‌ ಅಳವಡಿಕೆ ಕಾಮಗಾರಿಯೂ ವೇಗವಾಗಿ ನಡೆಯುತ್ತಿದ್ದು, ಉಕ್ಕು ಮತ್ತು ಕಬ್ಬಿಣದಿಂದ ತಯಾರಿಸಿದ ಸುಮಾರು 150 ಟನ್‌ ತೂಕದ ಎರಡು ಗರ್ಡರ್‌ಗಳನ್ನು ಅಳವಡಿಸಲಾಗಿದೆ. ಸಾಮಾನ್ಯವಾಗಿ ದೊಡ್ಡ ರಸ್ತೆ ಅಥವಾ ಸೇತುವೆಗಳ ನಿರ್ಮಾಣದ ವೇಳೆ ಈ ರೀತಿಯ ಉಕ್ಕಿನ ಗರ್ಡರ್‌ಗಳನ್ನು ಅಳವಡಿಸಲಾಗುತ್ತದೆ. ಈ ಮಾರ್ಗ ನಿರ್ಮಾಣದ ಹೊಣೆ ಹೊತ್ತಿರುವ ಐಟಿಡಿ ಇಂಡಿಯಾ ಕಂಪನಿಯು ದೊಡ್ಡ ಕ್ರೇನ್‌ಗಳನ್ನು ಬಳಸಿ ಈ ಗರ್ಡರ್‌ ಅಳವಡಿಸಿದೆ.

ಓದಿ :ಯೋಗ ದಿನ, ಪ್ರಧಾನಿ ಸ್ವಾಗತದ ಫಲಕಗಳು ಸೇರಿ ಅಕ್ರಮ ಬ್ಯಾನರ್​ಗಳ ತೆರವು: ಬಿಬಿಎಂಪಿ

For All Latest Updates

TAGGED:

ABOUT THE AUTHOR

...view details