ಬೆಂಗಳೂರು:ಇಂದು ಮುಖ್ಯಮಂತ್ರಿಗಳ ಗೃಹಕಚೇರಿ 'ಕೃಷ್ಣಾ'ದಲ್ಲಿ ಅಂತಾರಾಷ್ಟ್ರೀಯ ಶುಶ್ರೂಷಕರ ದಿನ ಆಚರಿಸಲಾಯಿತು.
ಸಿಎಂ ಕಚೇರಿಯಲ್ಲಿ ಅಂತಾರಾಷ್ಟ್ರೀಯ ಶುಶ್ರೂಷಕರ ದಿನಾಚರಣೆ ಸಂಭ್ರಮ.. - bangalore latest news
ಕೋವಿಡ್-19ರ ವಿರುದ್ಧದ ಸಮರದಲ್ಲಿ ದಾದಿಯರು ಸೇರಿ ನಮ್ಮ ಎಲ್ಲ ವೈದ್ಯಕೀಯ ಸಿಬ್ಬಂದಿ ಪರಿಶ್ರಮ, ಬದ್ಧತೆ ಮತ್ತು ಸೇವಾಭಾವ ಶ್ಲಾಘನೀಯ..
ಅಂತರರಾಷ್ಟ್ರೀಯ ಶುಶ್ರೂಷಕರ ದಿನಾಚರಣೆ
ಫ್ಲಾರೆನ್ಸ್ ನೈಟಿಂಗೇಲ್ ಅವರ 200ನೇ ಜನ್ಮದಿನದ ಪ್ರಯುಕ್ತ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ವತಿಯಿಂದ ಆಯೋಜಿಸಲಾಗಿದ್ದ ಈ ಸರಳ ಸಮಾರಂಭಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಚಾಲನೆ ನೀಡಿದರು.
ಕೋವಿಡ್-19ರ ವಿರುದ್ಧದ ಸಮರದಲ್ಲಿ ದಾದಿಯರು ಸೇರಿ ನಮ್ಮ ಎಲ್ಲ ವೈದ್ಯಕೀಯ ಸಿಬ್ಬಂದಿ ಪರಿಶ್ರಮ, ಬದ್ಧತೆ ಮತ್ತು ಸೇವಾಭಾವ ಶ್ಲಾಘನೀಯ ಎಂದು ಸಿಎಂ ಇದೇ ವೇಳೆ ಬಣ್ಣಿಸಿದರು. ಕಾರ್ಯಕ್ರಮದಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಮತ್ತು ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.