ಬೆಂಗಳೂರು: ಪರ್ಮಿಟ್ ಇಲ್ಲದೆ ರಾಜ್ಯದಲ್ಲಿ ಸಂಚರಿಸುತ್ತಿದ್ದ 4 ಅಂತಾರಾಜ್ಯ ಬಸ್‌ಗಳನ್ನು ವಿಶೇಷ ಕಾರ್ಯಾಚರಣೆ ನಡೆಸಿ ಯಲಹಂಕ ಪ್ರಾದೇಶಿಕ ಸಾರಿಗೆ ಕಚೇರಿಯ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಯಲಹಂಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಪ್ರಕಾಶ್ ನೇತೃತ್ವದಲ್ಲಿ ಹೈದರಾಬಾದ್ ರಸ್ತೆಯಲ್ಲಿ ವಿಶೇಷ ಕಾರ್ಯಾಚರಣೆ ಹಮ್ಮಿಕೊಳ್ಳಲಾಗಿತ್ತು.
ಪರ್ಮಿಟ್ ಇಲ್ಲದೆ ಸಂಚರಿಸುತ್ತಿದ್ದ 4 ಅಂತರ್ ರಾಜ್ಯ ಬಸ್‌ಗಳನ್ನು ವಶಕ್ಕೆ ಪಡೆದ ಅಧಿಕಾರಿಗಳು - ಬೆಂಗಳೂರು ಲೇಟೆಸ್ಟ್ ನ್ಯೂಸ್
ನಾಗಾಲ್ಯಾಂಡ್ ಹಾಗೂ ಅರುಣಾಚಲ ಪ್ರದೇಶದ ಪರ್ಮಿಟ್ ಹೊಂದಿರದ ಬಸ್‌ಗಳು ರಾಜ್ಯದಲ್ಲಿ ಸಂಚಾರ ನಡೆಸುತ್ತಿದ್ದನ್ನು ಗಮನಿಸಲಾಗಿದೆ. ರಾಜ್ಯದ ಪರ್ಮಿಟ್ ಪಡೆಯದೆ, ತೆರಿಗೆ ಕಟ್ಟದೆ ಇರುವುದು ಕಂಡು ಬಂದಿದೆ. ಈ ನಿಟ್ಟಿನಲ್ಲಿ ಬಸ್‌ಗಳನ್ನು ವಶಕ್ಕೆ ಪಡೆದಿದ್ದು, ದಾಖಲಾತಿಗಳನ್ನು ಹಾಜರುಪಡಿಸುವಂತೆ ಬಸ್ ಮಾಲೀಕರುಗಳಿಗೆ ನೋಟಿಸ್ ನೀಡಲಾಗಿದೆ.
ಇದೇ ವೇಳೆ ನಾಗಾಲ್ಯಾಂಡ್ ಹಾಗೂ ಅರುಣಾಚಲ ಪ್ರದೇಶದ ಪರ್ಮಿಟ್ ಹೊಂದಿರದ ಬಸ್‌ಗಳು ರಾಜ್ಯದಲ್ಲಿ ಸಂಚಾರ ನಡೆಸುತ್ತಿದ್ದನ್ನು ಗಮನಿಸಲಾಗಿದೆ. ರಾಜ್ಯದ ಪರ್ಮಿಟ್ ಪಡೆಯದೆ, ತೆರಿಗೆ ಕಟ್ಟದೆ ಇರುವುದು ಕಂಡು ಬಂದಿದೆ. ಈ ನಿಟ್ಟಿನಲ್ಲಿ ಬಸ್‌ಗಳನ್ನು ವಶಕ್ಕೆ ಪಡೆದಿದ್ದು, ದಾಖಲಾತಿಗಳನ್ನು ಹಾಜರುಪಡಿಸುವಂತೆ ಬಸ್ ಮಾಲೀಕರುಗಳಿಗೆ ನೋಟಿಸ್ ನೀಡಲಾಗಿದೆ. ಅವರು ದಾಖಲಾತಿಗಳನ್ನು ನೀಡಿದ ನಂತರ ಖಚಿತವಾದ ದಂಡದ ಮೊತ್ತದ ತಿಳಿದು ಬರಲಿದೆ ಎಂದು ಯಲಹಂಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಪ್ರಕಾಶ್ ಮಾಹಿತಿ ನೀಡಿದ್ದಾರೆ.
ಯಲಹಂಕ ಸಾರಿಗೆ ಕಚೇರಿಯ ಹಿರಿಯ ಮೋಟಾರ್ ವಾಹನ ನಿರೀಕ್ಷಕ ರಾಜ್‌ಕುಮಾರ್ ಹಾಗೂ ನಿರೀಕ್ಷಕಿ ಲಕ್ಷ್ಮೀ ಅವರ ನೇತೃತ್ವದ ತಂಡ ಈ ಕಾರ್ಯಾಚರಣೆ ನಡೆಸಿದೆ.