ಬೆಂಗಳೂರು:ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ನಲ್ಲಿ ತೊಡಗಿದ್ದ ಇಬ್ಬರು ಆರೋಪಿಗಳನ್ನು ಬಂಧನ ಮಾಡುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ದಂಧೆ: ಇಬ್ಬರು ಆರೋಪಿಗಳು ಅಂದರ್ - ಐಪಿಲ್ ಕ್ರಿಕೆಟ್ 2020 ಲೇಟೆಸ್ಟ್ ನ್ಯೂಸ್
ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ನಡೆದ ಐಪಿಎಲ್ ಕ್ರಿಕೆಟ್ ಪಂದ್ಯದ ವೇಳೆ ಬೆಟ್ಟಿಂಗ್ನಲ್ಲಿ ತೊಡಗಿದ್ದ ಆರೋಪಿಗಳನ್ನು ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಯುಎಇನಲ್ಲಿ ನಡೆದ ಐಪಿಎಲ್ ಕ್ರಿಕೆಟ್ ಪಂದ್ಯಾವಳಿಗೆ ಸಂಬಂಧಿಸಿದಂತೆ ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ನಡೆದ ಕ್ರಿಕೆಟ್ ಪಂದ್ಯಕ್ಕಾಗಿ ಬೆಟ್ಟಿಂಗ್ನಲ್ಲಿ ತೊಡಗಿದ್ರು. ಕ್ರಿಕೆಟ್ ಪಂದ್ಯಾವಳಿ ಕುರಿತು ಸದರಿ ತಂಡಗಳ ಸೋಲು ಮತ್ತು ಗೆಲುವಿನ ಬಗ್ಗೆ ಸಾರ್ವಜನಿಕರಿಂದ ಮೊಬೈಲ್ ಮೂಲಕ ಬೆಟ್ಟಿಂಗ್ ರೇಶ್ಯು ನೋಡಿಕೊಳ್ತಿದ್ರು. ತದನಂತರ ಮೊಬೈಲ್ ಪೋನ್ನಲ್ಲಿ ಹಣ ಪಣವಾಗಿ ಕಟ್ಟಿಸಿಕೊಂಡು ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದರು ಎಂದು ತಿಳಿದು ಬಂದಿದೆ.
ನಿನ್ನೆ ಹಿಂದಿನ ಪಂದ್ಯಕ್ಕೆ ಸಂಬಂಧಿಸಿದ ಗೆದ್ದವರಿಗೆ ಹಣ ಕೊಡಲು ಮತ್ತು ಸೋತವರಿಂದ ಹಣ ಪಡೆಯಲು ವರ್ತೂರು ಠಾಣಾ ವ್ಯಾಪ್ತಿಯ ನಂದಿನಿ ಟೀ ಸ್ಟಾಲ್ ಮುಂಭಾಗ ಬಂದಾಗ ಕೇಂದ್ರ ಅಪರಾಧ ವಿಭಾಗ ದಾಳಿ ಮಾಡಿ ಶಬ್ಬೀರ್ ಖಾನ್ ಎಂಬ ಆರೋಪಿ ಬಂಧಿಸಿದೆ. ನಂತರ ಈತನಿಂದ ಹಣ ಪಡೆಯಲು ಬಂದ ಮತ್ತೊಬ್ಬ ವ್ಯಕ್ತಿಯನ್ನ ಖೆಡ್ಡಾಕ್ಕೆ ಕೆಡವಿ 4 ಲಕ್ಷ ರೂ. ನಗದು, 1 ಮೊಬೈಲ್ ಫೋನ್ ವಶಪಡಿಸಿಕೊಂಡು ವರ್ತೂರ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಿದ್ದಾರೆ.