ಬೆಂಗಳೂರು: ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ತೊಡಗಿದ್ದ ಇಬ್ಬರು ಆರೋಪಿಗಳನ್ನ ಸಿಸಿಬಿ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಪ್ರಶಾಂತ್ ಮತ್ತು ಸಂತೋಷ್ ಬಂಧಿತ ಆರೋಪಿಗಳು. ಇವರಿಬ್ಬರು ರಾಜಾಜಿನಗರ ಪೊಲೀಸ್ ಠಾಣೆಯ ಪಕ್ಕದಲ್ಲೇ ಇರುವ ಆರ್.ಟಿ.ಒ ಕಾಂಪ್ಲೆಕ್ಸ್‌ನ ಮುಂಭಾಗ ಮಾರ್ಚ್ 31ರಂದು ನಡೆದ ಐಪಿಎಲ್ ಟೂರ್ನಿಯ ಲಖನೌ ಮತ್ತು ಚೆನ್ನೈ ನಡುವಿನ ಪಂದ್ಯಕ್ಕೆ ಬೆಟ್ಟಿಂಗ್ ಕಟ್ಟಿಸಿಕೊಂಡಿದ್ದರು ಎನ್ನಲಾಗ್ತಿದೆ.
ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್: ಬೆಂಗಳೂರಲ್ಲಿ ಇಬ್ಬರು ಆರೋಪಿಗಳು ಅರೆಸ್ಟ್ - ಬೆಂಗಳೂರಿನಲ್ಲಿ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ ಸಿಸಿಬಿ ಪೊಲೀಸರು
ರಾಜಾಜಿನಗರ ಪೊಲೀಸ್ ಠಾಣೆಯ ಪಕ್ಕದಲ್ಲೇ ಇರುವ ಆರ್.ಟಿ.ಒ ಕಾಂಪ್ಲೆಕ್ಸ್‌ನ ಮುಂಭಾಗ ಮಾರ್ಚ್ 31ರಂದು ನಡೆದ ಐಪಿಎಲ್ ಟೂರ್ನಿಯ ಲಖನೌ ಮತ್ತು ಚೆನ್ನೈ ನಡುವಿನ ಪಂದ್ಯಕ್ಕೆ ಬೆಟ್ಟಿಂಗ್ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಇಬ್ಬರು ಆರೋಪಿಗಳ ಬಂಧನ
ಅಂದು ಇಬ್ಬರು ಈ ಪಂದ್ಯದಲ್ಲಿ ಗೆದ್ದವರಿಗೆ ಹಣ ನೀಡಿ, ಸೋತವರಿಂದ ಹಣ ಪಡೆಯುವಾಗ ಸಿಸಿಬಿ ಅಧಿಕಾರಿಗಳು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಆರೋಪಿಗಳನ್ನ ಬಂಧಿಸಿದ್ದಾರೆ. ಆರೋಪಿಗಳಿಂದ 3.15 ಲಕ್ಷ ರೂ. ನಗದು, 2 ಮೊಬೈಲ್ ವಶಪಡಿಸಿಕೊಳ್ಳಲಾಗಿದೆ. ಈ ಕುರಿತು ರಾಜಾಜಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.