ಬೆಂಗಳೂರು: ಐಪಿಎಲ್ ಕ್ರಿಕೆಟ್ ಪಂದ್ಯಕ್ಕೆ ಸಂಬಂಧಿಸಿದಂತೆ ಬೆಟ್ಟಿಂಗ್ ಹವಾ ದಿನೇ ದಿನೆ ಸಿಲಿಕಾನ್ ಸಿಟಿಯಲ್ಲಿ ಹೆಚ್ಚಾಗುತ್ತಿದೆ. ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್: ಬೆಂಗಳೂರಿನಲ್ಲಿ ಇಬ್ಬರ ಬಂಧನ - Banglore latest crime news
ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ ಇಬ್ಬರು ಆರೋಪಿಗಳನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಹೊಯ್ಸಳ ಗೌಡ ಹಾಗೂ ನರಸಿಂಹ ಮೂರ್ತಿ ಬಂಧಿತರು. ಯುಎಇ ದೇಶದಲ್ಲಿ ನಡೆಯುತ್ತಿರುವ ಐಪಿಎಲ್ ಕ್ರಿಕೆಟ್ ಪಂದ್ಯಾವಳಿಗೆ ಸಂಬಂಧಪಟ್ಟಂತೆ ನಡೆದ ಪಂದ್ಯವೊಂದರ ಸೋಲು-ಗೆಲುವುಗಳನ್ನು lotusbook9.io ಎಂಬ ಆ್ಯಪ್/ ವೆಬ್ಸೈಟ್ ಮೂಲಕ ನೋಡಿಕೊಂಡು ಮೊಬೈಲ್ ಫೋನ್ ಮೂಲಕ ಹಣ ಪಣವಾಗಿ ಕಟ್ಟಿಸಿಕೊಂಡು ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದರು. ಈ ಹಿಂದೆ ನಡೆದ ಪಂದ್ಯಾವಳಿಗಳಲ್ಲಿ ಕೂಡ ಬೆಟ್ಟಿಂಗ್ ಆಟ ಆಡಿ ಸೋತವರಿಂದ ಹಣ ಪಡೆದು ಗೆದ್ದವರಿಗೆ ಹಣ ಕೊಡಲು ಇಬ್ಬರು ಆರೋಪಿಗಳು ಮಲ್ಲೇಶ್ವರಂ 11ನೇ ಕ್ರಾಸ್ ಬಳಿ ಬಂದಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಕೇಂದ್ರ ಅಪರಾಧ ವಿಭಾಗ ವಿಶೇಷ ವಿಚಾರಣಾ ದಳದ ಪೊಲೀಸರ ತಂಡ ದಾಳಿ ನಡೆಸಿ ಇಬ್ಬರನ್ನು ಬಂಧಿಸಿದೆ. ಬಂಧಿತರಿಂದ 13,50,000 ರೂ. ನಗದು ಹಾಗೂ ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದಾರೆ.