ಕರ್ನಾಟಕ

karnataka

ETV Bharat / state

ಮಾನನಷ್ಟ ಪ್ರಕರಣ: ಐಪಿಎಸ್ ಅಧಿಕಾರಿ ಡಿ.ರೂಪಾಗೆ ಜಾಮೀನು - ಐಪಿಎಸ್ ಅಧಿಕಾರಿ ಡಿ ರೂಪಾ

ಮಾನನಷ್ಟ ಪ್ರಕರಣ ಪ್ರಕರಣ ಸಂಬಂಧ ನಗರದ 24ನೇ ಹೆಚ್ಚುವರಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ವಿಚಾರಣೆಗೆ ಐಪಿಎಸ್ ಅಧಿಕಾರಿ ಡಿ.ರೂಪಾ ಹಾಜರಾಗಿದ್ದರು.

IPS officer D Rupa who got bail
ಮಾನನಷ್ಟ ಪ್ರಕರಣ: ಜಾಮೀನು ಪಡೆದ ಐಪಿಎಸ್ ಅಧಿಕಾರಿ ಡಿ.ರೂಪಾ

By

Published : Jun 6, 2023, 11:01 PM IST

ಬೆಂಗಳೂರು:ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹೂಡಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಸಮನ್ಸ್ ಜಾರಿ ಮಾಡಿದ ಹಿನ್ನೆಲೆಯಲ್ಲಿ ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ನಗರದ ಮ್ಯಾಜಿಸ್ಟ್ರೇಟ್ ಕೋರ್ಟ್‌ಗೆ ಹಾಜರಾಗಿ ಜಾಮೀನು ಪಡೆದುಕೊಂಡಿದ್ದಾರೆ.

ಇದನ್ನೂ ಓದಿ:ಪೋಷಕರು ಮದುವೆಗೆ ಒಪ್ಪದ ಕಾರಣ ಪ್ರೇಮಿಗಳು ಬಸ್​ನಲ್ಲಿ​ ಆತ್ಮಹತ್ಯೆಗೆ ಯತ್ನ.. ಯುವತಿ ಸಾವು

ಪ್ರಕರಣ ಸಂಬಂಧ ನಗರದ 24ನೇ ಹೆಚ್ಚುವರಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ವಿಚಾರಣೆಗೆ ರೂಪಾ ಮೌದ್ಗಿಲ್ ಹಾಜರಾಗಿದ್ದರು. ಹಾಜರಾತಿ ದಾಖಲಿಸಿಕೊಂಡ ನ್ಯಾಯಾಲಯ, 25 ಸಾವಿರ ರೂ ಮೊತ್ತದ ವೈಯಕ್ತಿಕ ಬಾಂಡ್ ಒದಗಿಸುವಂತೆ ಷರತ್ತು ವಿಧಿಸಿ ಜಾಮೀನು ಮಂಜೂರು ಮಾಡಿತು.

ಇದನ್ನೂ ಓದಿ:ಮದುವೆ ನಿಶ್ಚಯವಾಗಿದ್ದ ಯುವತಿ ಅಪಹರಿಸಿ ಮರುಭೂಮಿಯಲ್ಲಿ ಎತ್ತಿಕೊಂಡು 'ಸಪ್ತಪದಿ' ತುಳಿದ!

ಡಿ.ರೂಪಾ ಮೌದ್ಗಿಲ್ ಅವರು, ೨೦೨೩ರ ಫೆ.೧೮ ಮತ್ತು ೧೯ರಂದು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ತಮ್ಮ ವಿರುದ್ಧ ಕೀಳು ಅಭಿರುಚಿಯಿಂದ ಕೂಡಿದ ಆರೋಪ ಮಾಡಿದ್ದಾರೆ. ವಿದ್ಯುನ್ಮಾನ ಮಾಧ್ಯಮದಲ್ಲೂ ಹೇಳಿಕೆ ನೀಡಿದ್ದಾರೆ. ಆ ಆರೋಪಗಳು ತಮ್ಮ ವ್ಯಕ್ತಿತ್ವಕ್ಕೆ ಧಕ್ಕೆ ಉಂಟು ಮಾಡುವಂತಿವೆ. ತಮ್ಮ ತೇಜೋವಧೆ ಮಾಡುವ ದುರುದ್ದೇಶದಿಂದಲೇ ರೂಪ ಅವರು ಈ ಕೃತ್ಯ ಎಸಗಿರುವುದರಿಂದ ತಮ್ಮ ಖಾಸಗಿ, ಸಾಮಾಜಿಕ ಮತ್ತು ವೃತ್ತಿ ಬದುಕಿನ ಮೇಲೆ ಗಂಭೀರ ಪರಿಣಾಮ ಬೀರಿ, ಮಾನಸಿಕ ಯಾತನೆ ಉಂಟು ಮಾಡಿವೆ ಎಂದು ಆರೋಪಿಸಿ ರೋಹಿಣಿ ಸಿಂಧೂರಿ ಮಾ.೩ರಂದು ಅಧೀನ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು.

ಇದನ್ನೂ ಓದಿ:ಒಡಿಶಾ ರೈಲು ದುರಂತ: ಮೊದಲ FIR​ ದಾಖಲಿಸಿದ ಸಿಬಿಐ; ತಪ್ಪು ಸಾಬೀತಾದರೆ ಗರಿಷ್ಠ ಶಿಕ್ಷೆ ಎಷ್ಟು ಗೊತ್ತೇ!

ಅಲ್ಲದೆ, ಮಾನಹಾನಿ ಮಾಡಿ ಮಾನಸಿಕ ಯಾತನೆ ಉಂಟು ಮಾಡಿರುವುದಕ್ಕಾಗಿ ಡಿ.ರೂಪಾ ಅವರಿಂದ ಒಂದು ಕೋಟಿ ರೂಪಾಯಿಯನ್ನು ಪರಿಹಾರವಾಗಿ ಕೊಡಿಸಿಕೊಡಬೇಕು. ಅವರ ವಿರುದ್ಧ ಸೂಕ್ತ ದಂಡನೀಯ ಕ್ರಮ ಕೈಗೊಳ್ಳಬೇಕು ಎಂದು ಕೋರಿದ್ದರು. ಅದನ್ನು ಪರಿಗಣಿಸಿದ್ದ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ರೂಪಾ ಅವರ ವಿರುದ್ಧ ಕ್ರಿಮಿನಲ್ ಮಾನನಷ್ಟ ಪ್ರಕರಣ ದಾಖಲಿಸಲು ಆದೇಶಿಸಿತ್ತು. ಅಲ್ಲದೆ, ೨೦೨೩ರ ಮಾ.೨೪ರಂದು ರೂಪಾ ಅವರಿಗೆ ಸಮನ್ಸ್ ಜಾರಿ ಮಾಡಿತ್ತು.

ಇದನ್ನೂ ಓದಿ:ನಕಲಿ ರೈಡ್ ಸೃಷ್ಟಿಸಿ ಆ್ಯಪ್ ಆಧಾರಿತ ಕ್ಯಾಬ್ ಕಂಪನಿಗಳಿಗೆ ವಂಚನೆ; ಪ್ರಕರಣ ಬಯಲಿಗೆಳೆದ ಸಿಸಿಬಿ

ಇದನ್ನೂ ಓದಿ:ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ವ್ಯಕ್ತಿಗೆ 3 ವರ್ಷ ಕಠಿಣ‌ ಜೈಲು ಶಿಕ್ಷೆ

ABOUT THE AUTHOR

...view details