ಬೆಂಗಳೂರು: ಕಳೆದ 6 ತಿಂಗಳಿಂದ ಕ್ಯಾನ್ಸರ್ನಿಂದ ಬಳಲುತ್ತಿದ್ದ ಹಿರಿಯ IPS ಅಧಿಕಾರಿ ಕೆ.ವಿ ಜಗದೀಶ್ ಭಾನುವಾರ ಮೃತಪಟ್ಟಿದ್ದಾರೆ. ರಾಜಧಾನಿಯ HCG ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಜಗದೀಶ್, ನಿನ್ನೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. 2006 ರಲ್ಲಿ ಪೊಲೀಸ್ ಸೇವೆಗೆ ಸೇರಿ 2017 ರಲ್ಲಿ ಐಪಿಎಸ್ ಅಧಿಕಾರಿಯಾಗಿ ಮುಂಬಡ್ತಿ ಪಡೆದಿದ್ದರು.
ಪೊಲೀಸ್ ಇಲಾಖೆಯ ವಲಯದಲ್ಲಿ ತಮ್ಮ ಅತ್ಯುತ್ತಮ ಗುಣ, ದಕ್ಷತೆ, ಪ್ರಾಮಾಣಿಕತೆಯಿಂದಲೇ ಹೆಸರಾಗಿದ್ದ ಜಗದೀಶ್, ಅನೇಕ ದಿನಗಳಿಂದ ಕ್ಯಾನ್ಸರ್ಗೆ ತುತ್ತಾಗಿದ್ದರು. ನಗರದ ಹೆಚ್.ಸಿ.ಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.