ಬೆಂಗಳೂರು: ಸಂಭಾವ್ಯ ಸಚಿವರಿಗೆ ದೂರವಾಣಿ ಕರೆ ಮಾಡಿ ಪ್ರಮಾಣ ವಚನ ಸ್ವೀಕಾರಕ್ಕೆ ಸಿದ್ಧರಾಗುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಹ್ವಾನ ನೀಡಿದ್ದಾರೆ ಎನ್ನಲಾಗಿದೆ.
ಸಂಭಾವ್ಯ ಶಾಸಕರಿಗೆ ಕರೆ ಮಾಡಿ ಪ್ರಮಾಣವಚನ ಸ್ವೀಕಾರಕ್ಕೆ ಸಿದ್ದರಾಗಿ ಎಂದ್ರ ಸಿಎಂ? - karnataka state govt
ಸಚಿವ ಸ್ಥಾನ ಸಿಗುವ ಖಚಿತತೆ ಇರುವ ಕೆಲವು ಶಾಸಕರಿಗೆ ಮಾತ್ರ ಯಡಿಯೂರಪ್ಪ ಆಹ್ವಾನ ನೀಡಿದ್ದಾರೆ ಎನ್ನುವ ಮಾಹಿತಿ ಸಿಕ್ಕಿದ್ದು ಆದರೆ ಸಿಎಂ ಆಪ್ತ ಮೂಲಗಳು ಇದನ್ನು ಇನ್ನೂ ಖಚಿತಪಡಿಸಿಲ್ಲ.
ಸಚಿವ ಸ್ಥಾನ ಸಿಗುವ ಖಚಿತತೆ ಇರುವ ಕೆಲವು ಶಾಸಕರಿಗೆ ಮಾತ್ರ ಯಡಿಯೂರಪ್ಪ ಆಹ್ವಾನ ನೀಡಿದ್ದಾರೆ ಎನ್ನುವ ಮಾಹಿತಿ ಸಿಕ್ಕಿದ್ದು ಆದರೆ ಸಿಎಂ ಆಪ್ತ ಮೂಲಗಳು ಇದನ್ನು ಇನ್ನೂ ಖಚಿತಪಡಿಸಿಲ್ಲ.
ಬಿಜೆಪಿ ಹೈಕಮಾಂಡ್ನಿಂದ ಇನ್ನೂ ಮಾಹಿತಿ ಬಂದಿಲ್ಲ ಎನ್ನುವ ಉತ್ತರ ಸಿಎಂ ಮೂಲಗಳಿಂದ ಬರುತ್ತಿದೆ. ಜಗದೀಶ್ ಶೆಟ್ಟರ್, ಗೋವಿಂದ ಕಾರಜೋಳ, ಉಮೇಶ್ ಕತ್ತಿ, ಶ್ರೀರಾಮುಲು, ಬಸವರಾಜ ಬೊಮ್ಮಾಯಿ, ಕೆ.ಎಸ್.ಈಶ್ವರಪ್ಪ, ಮಾಧುಸ್ವಾಮಿ, ಅಶ್ವತ್ಥನಾರಾಯಣ, ಆರ್.ಅಶೋಕ್, ವಿ.ಸೋಮಣ್ಣ, ರಾಮದಾಸ್, ಬಾಲಚಂದ್ರ ಜಾರಕಿಹೊಳಿಗೆ ಸಿಎಂ ದೂರವಾಣಿ ಕರೆ ಮಾಡಿ ಸಚಿವರಾಗಿ ಪ್ರಮಾಣ ವಚನ ಸ್ವೀಕಾರಕ್ಕೆ ಆಗಮಿಸುವಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.