ಬೆಂಗಳೂರು:ಕೇಂದ್ರ ಚುನಾವಣಾ ಆಯೋಗ ಹಾಗೂ ಕೇಂದ್ರ ಸರ್ಕಾರಕ್ಕೆ ವಿವೇಚನೆ ಇದ್ದಿದ್ದರೆ ವಿಧಾನ ಪರಿಷತ್ ಚುನಾವಣೆ, ಉಪಚುನಾವಣೆ ಹಾಗೂ ಬಿಹಾರ ಸೇರಿದಂತೆ ದೇಶದ ಹಲವೆಡೆ ಚುನಾವಣೆಗಳನ್ನು ನಡೆಸಬಾರದಿತ್ತು ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿದರು.
ಪಕ್ಷದ ಕಚೇರಿ ಜೆ.ಪಿ. ಭವನದಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ದೇಶದಲ್ಲಿ ಅದರಲ್ಲೂ ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಾಗಿದೆ. ಇಂತಹ ಸಂದರ್ಭದಲ್ಲಿ ಚುನಾವಣೆ ಅವಶ್ಯಕತೆ ಇದೆಯಾ? ಹಳ್ಳಿಗಳಿಗೆ ಹೋದರೆ ಸಾಮಾಜಿಕ ಅಂತರ ಕಾಪಾಡುವುದು ಕಷ್ಟ. ಇನ್ನು ಮೂರು ತಿಂಗಳು ಚುನಾವಣೆಗಳನ್ನು ಮುಂದೆ ಹಾಕಿದ್ದರೆ ಏನಾಗುತ್ತಿತ್ತು. ಚುನಾವಣೆ ಸಂದರ್ಭದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸಾಧ್ಯವೇ? ಎಂದು ಪ್ರಶ್ನಿಸಿದರು.