ಬೆಂಗಳೂರು:ರಾಜ್ಯದಲ್ಲಿ ಕೋವಿಡ್ ಸಮಸ್ಯೆ ನಿಯಂತ್ರಣಕ್ಕೆ ಬರುವವರೆಗೂ ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ವಿಲೀನಗೊಳಿಸುವುದು ಉತ್ತಮ ಎಂಬ ಅಭಿಪ್ರಾಯವನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ವ್ಯಕ್ತಪಡಿಸಿದ್ದಾರೆ.
ರಾಜ್ಯ ಸರ್ಕಾರಕ್ಕೆ ಈ ಮೇಲಿನ ಸಲಹೆ ಟ್ವೀಟ್ ಮೂಲಕ ಖಂಡ್ರೆ ನೀಡಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಕೋವಿಡ್ ನಿಯಂತ್ರಣದಲ್ಲಿ ದಿನಕ್ಕೊಂದು ಆದೇಶ, ಘಳಿಗೆಗೆ ಒಂದು ಸುತ್ತೋಲೆ, ಕ್ಷಣಕ್ಕೊಂದು ನಿರ್ಧಾರ ತೆಗೆದುಕೊಂಡು ನಿರ್ವಹಣೆಯಲ್ಲಿ ವಿಫಲವಾಗಿದೆ. ಇಲಾಖೆಗಳ ಸಮನ್ವಯದ ಕೊರತೆಯಿಂದ ಜನ ರಸ್ತೆಯಲ್ಲೇ ಪರದಾಡುವಂತಾಗಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ವಿವರಿಸಿದ್ದಾರೆ.