ಕರ್ನಾಟಕ

karnataka

ETV Bharat / state

ಕೊರೊನಾ ಲಸಿಕೆ ಮೊದಲ ಡೋಸ್ ಪಡೆದ ಈಶ್ವರ್ ಖಂಡ್ರೆ - ಈಶ್ವರ್ ಖಂಡ್ರೆ

ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಬೆಂಗಳೂರಿನಲ್ಲಿ ಕೊರೊನಾ ಲಸಿಕೆಯ ಮೊದಲ ಡೋಸ್ ಪಡೆದಿದ್ದಾರೆ.

Ishwar Khandre,received first dose of the Corona vaccine
ಕೊರೊನಾ ಲಸಿಕೆ ಮೊದಲ ಡೋಸ್ ಪಡೆದ ಈಶ್ವರ್ ಖಂಡ್ರೆ

By

Published : Mar 22, 2021, 6:19 PM IST

ಬೆಂಗಳೂರು:ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೆಪಿಸಿಸಿ ಕಾರ್ಯಧ್ಯಕ್ಷ ಈಶ್ವರ್ ಖಂಡ್ರೆ ಕೊರೊನಾ ಲಸಿಕೆಯ ಮೊದಲ ಡೋಸ್ ಪಡೆದಿದ್ದಾರೆ.

ಲಸಿಕೆ ಪಡೆದು ಮಾತನಾಡಿದ ಖಂಡ್ರೆ ಹಿರಿಯ ನಾಗರಿಕರಿಗೆ ಲಸಿಕೆ ಸಂಪೂರ್ಣವಾಗಿ ಸುರಕ್ಷಿತವಾಗಿದ್ದು, ಯಾವುದೇ ರೀತಿಯ ಅಡ್ಡ ಪರಿಣಾಮಗಳು ಇರುವುದಿಲ್ಲ. ಅರ್ಹ ವ್ಯಕ್ತಿಗಳು ಆದಷ್ಟು ಬೇಗ ನೋಂದಣಿ ಮಾಡಿಕೊಂಡು ಲಸಿಕೆ ಪಡೆಯಬೇಕೆಂದು ಸಲಹೆ ನೀಡಿದರು.

45 ವರ್ಷ ವಯೋಮಿತಿ ಮೀರಿದ ಪ್ರತಿಯೊಬ್ಬರೂ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಸರ್ಕಾರ ಸೂಚಿಸಿದ್ದು, ಪ್ರಕಾರ ಪ್ರತಿಯೊಬ್ಬರು ಹಾಕಿಸಿಕೊಳ್ಳುತ್ತಿದ್ದಾರೆ. ರಾಜಕೀಯ ನಾಯಕರು ಕೋವಿಡ್ ಲಸಿಕೆ ಹಾಕಿಸಿಕೊಳ್ಳುತ್ತಿದ್ದು ಮೂರು ದಿನಗಳ ಹಿಂದಷ್ಟೇ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸಹ ಕೋವಿಡ್ ಲಸಿಕೆ ಹಾಕಿಸಿಕೊಂಡಿದ್ದಾರೆ.

ABOUT THE AUTHOR

...view details