ಬೆಂಗಳೂರು: ಫೋನ್ ಕದ್ದಾಲಿಕೆ ಬಗ್ಗೆ ಸಿಬಿಐ ತನಿಖೆ ನಿಸ್ಪಕ್ಷಪಾತವಾಗಿ ಆಗಬೇಕು. ದ್ವೇಷದ ರಾಜಕಾರಣ ಇಟ್ಟುಕೊಂಡು ತನಿಖೆಯಾಗಬಾರದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಒತ್ತಾಯಿಸಿದ್ದಾರೆ.
ಫೋನ್ ಕದ್ದಾಲಿಕೆ ಬಗ್ಗೆ ಸಿಬಿಐ ತನಿಖೆ ನಿಸ್ಪಕ್ಷಪಾತವಾಗಿರಲಿ: ಈಶ್ವರ್ ಖಂಡ್ರೆ - ಈಶ್ವರ್ ಖಂಡ್ರೆ
ದ್ವೇಷದ ರಾಜಕಾರಣ ಇಟ್ಟುಕೊಂಡು ತನಿಖೆಯಾಗಬಾರದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಒತ್ತಾಯಿಸಿದ್ದಾರೆ.
ಈಶ್ವರ್ ಖಂಡ್ರೆ
ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಆಪರೇಷನ್ ಕಮಲ ಸಂದರ್ಭದಲ್ಲಿಯೂ ಕುದುರೆ ವ್ಯಾಪಾರ ಆಗಿದೆ. ಅದರ ಬಗ್ಗೆಯೂ ತನಿಖೆ ನಡೆಯಲಿ ಎಂದು ಆಗ್ರಹಿಸಿದರು. ಫೋನ್ ಕದ್ದಾಲಿಕೆ ವಿಚಾರಕ್ಕೆ ಸಂಬಂಧಿಸಿಂದತೆ ನಮ್ಮಲ್ಲಿ ಯಾವುದೇ ರೀತಿಯ ಗೊಂದಲದ ಹೇಳಿಕೆ ಇಲ್ಲ. ನಿಷ್ಪಕ್ಷಪಾತ ಹಾಗೂ ಸಮಗ್ರ ತನಿಖೆಗೆ ಆಗ್ರಹಿಸುತ್ತಿದ್ದೇವೆ ಎಂದರು.
ಇದೇ ವೇಳೆ ಪ್ರವಾಹದ ವಿಚಾರದಲ್ಲಿ ಸರ್ಕಾರದ ಕ್ರಮ ತೃಪ್ತಿಕರವಾಗಿಲ್ಲವೆಂದು ಸರ್ಕಾರದ ಕಾರ್ಯ ವೈಖರಿ ಬಗ್ಗೆ ಖಂಡ್ರೆ ಅಸಮಾಧಾನ ವ್ಯಕ್ತಪಡಿಸಿದರು.