ಬೆಂಗಳೂರು: ಐಟಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮುಂದೂಡಿದೆ.
ಐಟಿ ದಾಳಿ ಪ್ರಕರಣದಿಂದ ತಮ್ಮನ್ನು ಕೈಬಿಡುವಂತೆ ಕೋರಿ ಡಿಕೆಶಿ ಅರ್ಜಿ ಸಲ್ಲಿಸಿದ್ದರು. ಸಿಟಿ ಸಿವಿಲ್ ನ್ಯಾಯಲಯದ ನ್ಯಾ.ರಾಮಚಂದ್ರ ಹುದ್ದಾರ್ ಅವರ ಪೀಠ ಈ ಅರ್ಜಿ ವಿಚಾರಣೆಯನ್ನ ಮುಂದೂಡಿದ್ದಾರೆ.
ಡಿಕೆಶಿ ಪರ ವಕೀಲ ಶ್ಯಾಂ ಸುಂದರ್ ವಾದ ಮಂಡನೆ ಮಾಡಿ, 2 ನೇ ಆರೋಪಿ ವಿರುದ್ಧ ಪ್ರಾಷಿಕ್ಯೂಷನ್ ಗೆ ಹೈಕೋರ್ಟ್ ತಡೆ ನೀಡಿದೆ. ನ್ಯಾಯಾಲಯದಲ್ಲಿ ಸಾಕ್ಷ್ಯ ವಿಚಾರಣೆ ವೇಳೆ ಎಲ್ಲಾ ಆರೋಪಿಗಳು ಹಾಜರಿರಬೇಕು. ಆದರೆ, 2 ನೇ ಆರೋಪಿ ಸಚಿನ್ ನಾರಾಯಣ್ ಗೈರುಹಾಜರಿ ಇರುವಾಗ ವಿಚಾರಣೆ ನಡೆಸುವುದು ಬೇಡ. ಹೀಗಾಗಿ ಸಾಕ್ಷಿಗಳ ವಿಚಾರಣೆ ಮುಂದೂಡುವಂತೆ ವಕೀಲ ಶ್ಯಾಂ ಸುಂದರ್ ಮನವಿ ಮಾಡಿದರು.
ವಾದ ಆಲಿಸಿದ ನ್ಯಾಯಾಲಯ 4 ವಾರಗಳ ಕಾಲ ವಿಚಾರಣೆ ಮುಂದೂಡಿದೆ. ಆಗಸ್ಟ್ 2017ರಲ್ಲಿ ಸಚಿವ ಡಿ.ಕೆ.ಶಿವಕುಮಾರ್ ದೆಹಲಿ ನಿವಾಸದ ಮೇಲೆ ಹಾಗೂ ಕರ್ನಾಟಕದ ನಿವಾಸದ ಮೇಲೂ ಐಟಿ ದಾಳಿಯಾಗಿತ್ತು. ಈ ಸಂದರ್ಭದಲ್ಲಿ ಐಟಿ ಅಧಿಕಾರಿಗಳು ಪ್ರಕರಣ ದಾಖಲಿಸಿ, ತನಿಖೆ ಮುಂದುವರೆಸಿದ್ದರು.