ಬೆಂಗಳೂರು: ದೆಹಲಿಯ ಡಿಕೆಶಿ ನಿವಾಸಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಮೊರೆ ಹೋಗಿದ್ದ ಮಾಜಿ ಸಚಿವ ಡಿ.ಕೆ. ಶಿವಕುಮಾರ್ಗೆ ಹಿನ್ನಡೆಯಾಗಿದೆ!
ಐಟಿ ದಾಳಿ ಪ್ರಕರಣ: ಮಾಜಿ ಸಚಿವ ಡಿ.ಕೆ. ಶಿವಕುಮಾರ್ಗೆ ಮತ್ತೆ ಹಿನ್ನಡೆ
ಐಟಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮನ್ನು ಆರೋಪದಿಂದ ಕೈಬಿಡುವಂತೆ ಡಿ.ಕೆ.ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ ಪೀಠ ವಜಾಗೊಳಿಸಿದ್ದು, ಇದರಿಂದ ಡಿಕೆಶಿಗೆ ಮತ್ತೆ ಹಿನ್ನಡೆಯಾದಂತಾಗಿದೆ.
ಐಟಿ ದಾಳಿ ಪ್ರಕರಣ
ಆರೋಪದಿಂದ ಕೈಬಿಡುವಂತೆ ಡಿಕೆಶಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ ಪೀಠ ವಜಾಗೊಳಿಸಿದೆ. ಡಿಕೆಶಿ ಜೊತೆ ಅವರ ಆಪ್ತರಾದ ಸುನೀಲ್ ಕುಮಾರ್ ಶರ್ಮಾ, ರಾಜೇಂದ್ರ, ಆಂಜನೇಯ ಸಲ್ಲಿಸಿದ್ದ ಅರ್ಜಿಗಳನ್ನು ಸಹ ಹೈಕೋರ್ಟ್ ವಜಾಗೊಳಿಸಿದೆ.
ಅಲ್ಲದೇ ದೆಹಲಿ ಫ್ಲಾಟ್ನಲ್ಲಿ ಪತ್ತೆಯಾದ ಕೋಟಿ ಹಣಕ್ಕೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆ, ಡಿಕೆಶಿ ಹಾಗೂ ಡಿಕೆಶಿ ಆಪ್ತರ ವಿರುದ್ಧ ಆರೋಪ ಪಟ್ಟಿಯನ್ನ ರೆಡಿ ಮಾಡಿತ್ತು. ಇದರಿಂದ ಕೈಬಿಡುವಂತೆ ಡಿಕೆಶಿ ಅವರು ಸಲ್ಲಿಸಿದ್ದ ಮರು ಪರಿಶೀಲನಾ ಅರ್ಜಿಯ ವಿಚಾರಣೆ ಇಂದು ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ನಡೆಯಿತು.
Last Updated : Nov 12, 2019, 3:58 PM IST