ಕರ್ನಾಟಕ

karnataka

ETV Bharat / state

ಬೆಂಗಳೂರಲ್ಲಿ ಜ್ಯುವೆಲರಿ ಉದ್ಯಮಿಗಳ ಮನೆ, ಕಚೇರಿಗಳ ಮೇಲೆ ಐಟಿ ದಾಳಿ

ಬೆಂಗಳೂರಲ್ಲಿ ಉದ್ಯಮಿಗಳ ಮನೆ, ಕಚೇರಿ ಮೇಲೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ಮಾಡಿ, ದಾಖಲಾತಿಗಳ ಪರಿಶೀಲನೆ ನಡೆಸಿದ್ದಾರೆ.

ಐಟಿ ಅಧಿಕಾರಿಗಳ ದಾಳಿ
ಐಟಿ ಅಧಿಕಾರಿಗಳ ದಾಳಿ

By ETV Bharat Karnataka Team

Published : Oct 12, 2023, 9:25 AM IST

Updated : Oct 12, 2023, 12:30 PM IST

ಬೆಂಗಳೂರು:ಕಳೆದ ವಾರ ನಗರದ ಹಲವು ಉದ್ಯಮಿಗಳ ಕಚೇರಿ, ಮನೆಗಳ ಮೇಲೆ ದಾಳಿ ನಡೆಸಿದ್ದ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಇಂದೂ ಸಹ ತಮ್ಮ ಪರಿಶೀಲನೆ ಮುಂದುವರೆಸಿದ್ದಾರೆ. ನಗರದ ಸುಮಾರು ಹತ್ತಕ್ಕೂ ಅಧಿಕ ಕಡೆಗಳಲ್ಲಿ‌ ಆದಾಯ ತೆರಿಗೆ ಅಧಿಕಾರಿಗಳು ಬೆಳ್ಳಂಬೆಳಗ್ಗೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.

ಉದ್ಯಮಿಗಳು, ಜ್ಯುವೆಲರಿ ಶಾಪ್ ಮಾಲೀಕರ ಮನೆ ಮತ್ತು ಕಚೇರಿಗಳಲ್ಲಿ ಪರಿಶೀಲನೆ ಅಧಿಕಾರಿಗಳು ಶೋಧ ಕಾರ್ಯ ನಡೆಸುತ್ತಿದ್ದಾರೆ. ಸರ್ಜಾಪುರ ಬಳಿಯ ಮುಳ್ಳೂರು, ಆರ್.ಎಂ.ವಿ ಎಕ್ಸ್ಟೆನ್ಷನ್, ಬಿಇಎಲ್ ಸರ್ಕಲ್, ಮಲ್ಲೇಶ್ವರಂ, ಡಾಲರ್ಸ್ ಕಾಲೋನಿ, ಸದಾಶಿವನಗರ, ಮತ್ತಿಕೇರಿ ಸೇರಿದಂತೆ ಹತ್ತಕ್ಕೂ ಹೆಚ್ಚು ಕಡೆಗಳಲ್ಲಿ ಪರಿಶೀಲನೆ ಮುಂದುವರೆದಿದೆ.

ಆದಾಯ ತೆರಿಗೆ ವಂಚನೆ ಆರೋಪ ಕಂಡು ಬಂದ ಹಿನ್ನೆಲೆಯಲ್ಲಿ ಚಿನ್ನ ಗಿರವಿ ಮತ್ತು ಖರೀದಿ ಮಾಡುವ ಕಂಪನಿಗಳ ಮೇಲೆ ದಾಳಿ ನಡೆಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಇದನ್ನೂ ಓದಿ: ತೆರಿಗೆ ವಂಚನೆ ಆರೋಪ: ಬೆಂಗಳೂರಿನ 15 ಕ್ಕೂ ಹೆಚ್ಚು ಕಡೆ ಐಟಿ ದಾಳಿ, ದಾಖಲೆಗಳ ಪರಿಶೀಲನೆ

ಕಳೆದ ವಾರ ಕೂಡ ತೆರಿಗೆ ವಂಚನೆ ಆರೋಪದ ಮೇಲೆ ಜ್ಯುವೆಲರಿ ಉದ್ಯಮಿಗಳ ಮೇಲೆ ಐಟಿ ದಾಳಿ ಮಾಡಿ ಪರಿಶೀಲನೆ ನಡೆಸಿತ್ತು. ಕಳೆದ ಬಾರಿ ಸಿಕ್ಕ ದಾಖಲಾತಿಗಳ ಆಧರಿಸಿ ಸದ್ಯ ದಾಳಿ ಮಾಡಲಾಗಿದೆ. ಜೊತೆಗೆ, ಕೆಲ ಜ್ಯುವೆಲರಿ ಉದ್ಯಮಿಗಳ ಮನೆ ಮತ್ತು ಕಚೇರಿಗಳ ಮೇಲೆ ಮತ್ತೊಮ್ಮೆ ದಾಳಿ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

120 ಕಾರಲ್ಲಿ ಬಂದ ಅಧಿಕಾರಿಗಳು:ಇಂದು ಬೆಳ್ಳಂಬೆಳಗ್ಗೆ ಸುಮಾರು 120 ಕಾರುಗಳಲ್ಲಿ ಐಟಿ ಅಧಿಕಾರಿಗಳು ಆಗಮಿಸಿ, ಬೆಂಗಳೂರಿನ ಹಲವೆಡೆ ಏಕಕಾಲಕ್ಕೆ ದಾಳಿ ಮಾಡಿದ್ದಾರೆ. ದಾಖಲಾತಿಗಳ ಶೋಧ ಕಾರ್ಯ ನಡೆಸಿದ್ದಾರೆ. ಚೆನ್ನೈ ಮತ್ತು ದೆಹಲಿ ಐಟಿ ಅಧಿಕಾರಿಗಳು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ.

ಕಳೆದ ವಾರ ದಾಳಿ ನಡೆಸಿದ್ದ ಐಟಿ:ಬೆಂಗಳೂರಿನ 15 ಕ್ಕೂ ಹೆಚ್ಚು ಕಡೆ ಕಳೆದ ವಾರ ಅಕ್ಟೋಬರ್ 4 ರಂದು ಬೆಳಗ್ಗೆ ಐಟಿ ಅಧಿಕಾರಿಗಳು ಕಾರ್ಯಾಚರಣೆಗೆ ಇಳಿದಿದ್ದರು. ಚಿನ್ನಾಭರಣ ಉದ್ಯಮಿಗಳ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ಮಾಡಿ, ದಾಖಲಾತಿಗಳನ್ನು ವಶಕ್ಕೆ ಪಡೆದಿದ್ದರು. ವಿಜಯನಗರ ಬಿಟಿಎಂ, ಹುಳಿಮಾವು, ಸದಾಶಿವನಗರ, ಸ್ಯಾಂಕಿ ಟ್ಯಾಂಕ್ ಸೇರಿದಂತೆ ಹಲವೆಡೆ ದಾಳಿ ಕೈಗೊಂಡಿದ್ದರು.

ಬೆಂಗಳೂರಲ್ಲಿ ಸೆಪ್ಟಂಬರ್​ನಲ್ಲೂ ನಡೆದಿತ್ತು ರೇಡ್: ಸೆಪ್ಟಂಬರ್ 27 ರಂದು ನಗರದ ಮಾಹಿತಿ ತಂತ್ರಜ್ಞಾನ ಸಂಸ್ಥೆಗಳ ಮೇಲೆ ಐಟಿ ದಾಳಿ ಮಾಡಿತ್ತು. ಸಿ.ವಿ.ರಾಮನ್ ನಗರದಲ್ಲಿರುವ ಬಾಗಮನೆ ಟೆಕ್ ಪಾರ್ಕ್ ಕ್ಯಾಂಪಸ್‌ ಒಳಗಿನ ಕೆಲವು ಖಾಸಗಿ ಕಂಪನಿಗಳು ಹಾಗೂ ಹುಳಿಮಾವು ಬಳಿಯಿರುವ ಐಟಿ ಕಂಪನಿಯೂ ಸೇರಿದಂತೆ 10ಕ್ಕೂ ಹೆಚ್ಚು ಕಡೆ ಆದಾಯ ತೆರಿಗೆ ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದರು.

Last Updated : Oct 12, 2023, 12:30 PM IST

ABOUT THE AUTHOR

...view details