ಬೆಂಗಳೂರು: ಐಟಿ ಅಧಿಕಾರಿಗಳು ತಮ್ಮ ಅಧಿಕಾರ ದುರುಪಯೋಗ ಪಡಿಸಿಕೊಂಡು ದಾಳಿ ಮುಂದುವರಿಸಿದ್ದು, ಇದನ್ನು ಖಂಡಿಸುವುದಾಗಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಐಟಿ ಅಧಿಕಾರಿಗಳಿಂದ ಮತ್ತೆ ಅಧಿಕಾರ ದುರುಪಯೋಗ: ಸಿಎಂ ಆರೋಪ - undefined
ಐಟಿ ಅಧಿಕಾರಿಗಳು ತಮ್ಮ ಅಧಿಕಾರ ದುರುಪಯೋಗ ಪಡಿಸಿಕೊಂಡು ದಾಳಿ ಮುಂದುವರಿಸಿದ್ದು, ಚುನಾವಣಾ ಆಯೋಗ ಕೂಡಲೇ ಮಧ್ಯ ಪ್ರವೇಶಿಸುವ ಅಗತ್ಯವಿದೆ ಎಂದು ಟ್ವೀಟ್ ಮಾಡಿದ ಸಿಎಂ ಕುಮಾರಸ್ವಾಮಿ.
ಸಿಎಂ ಆರೋಪ
ಮಂಡ್ಯದ ಜೆಡಿಎಸ್ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಅಕ್ಕಿ ಗಿರಣಿಗಳ ಮೇಲೆ ಬೆಳಗಿನ ಜಾವ 4 ಗಂಟೆವರೆಗೆ ದಾಳಿ ಮಾಡಿ ಸ್ಪೈ ಕ್ಯಾಮರಾ ಅಳವಡಿಸಿದ್ದಾರೆ. ರೈಲ್ವೆ ಅಧಿಕಾರಿಗಳ ಸೋಗಿನಲ್ಲಿ ಕಾರು ಬಾಡಿಗೆ ಪಡೆದಿದ್ದಾರೆ. ಮೈಸೂರಿನ ಸಿಎಫ್ಟಿಆರ್ಐನಲ್ಲಿ ತಂಗಿರುವ ಅಧಿಕಾರಿಗಳು ಕಾರ್ಯಕರ್ತರನ್ನು ಬೆದರಿಸಲು ಈ ತಂತ್ರ ಹೆಣೆದಿದ್ದಾರೆ.
ಕೇಂದ್ರ ಸರ್ಕಾರದ ನೇರ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಈ ತಂತ್ರವನ್ನು ಬಲವಾಗಿ ಖಂಡಿಸುತ್ತೇನೆ. ಚುನಾವಣಾ ಆಯೋಗ ಕೂಡಲೇ ಮಧ್ಯ ಪ್ರವೇಶಿಸುವ ಅಗತ್ಯವಿದೆ ಎಂದು ಕುಮಾರಸ್ವಾಮಿ ಟ್ವೀಟ್ನಲ್ಲಿ ಒತ್ತಾಯಿಸಿದ್ದಾರೆ.