ಬೆಂಗಳೂರು: ಮೈ ಶುಗರ್ ಸಕ್ಕರೆ ಕಾರ್ಖಾನೆ ವಿಚಾರಕ್ಕೆ ಸಂಬಂಧಿಸಿದಂತೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಡಾ. ನಾರಾಯಣಗೌಡ ಹಾಗೂ ಸಕ್ಕರೆ ಸಚಿವ ಶಿವರಾಮ ಹೆಬ್ಬಾರ್ ನೇತೃತ್ವದಲ್ಲಿ ಇಂದು ವಿಕಾಸೌಧದಲ್ಲಿ ಸಭೆ ಕರೆಯಲಾಗಿತ್ತು. ಈ ವೇಳೆ ಖಾಸಗಿಯವರಿಗೆ ನೀಡುವ ಸಂಪುಟ ಸಭೆಯ ನಿರ್ಣಯ ಹಿಂಪಡೆಯುವಂತೆ ಜಿಲ್ಲೆಯ ಶಾಸಕರು, ರೈತ ಮುಖಂಡರು ಆಗ್ರಹಿಸಿದ್ದಾರೆ.
ಸರ್ಕಾರ ಕೇವಲ 10-12 ಕೋಟಿ ರೂ. ಕೊಟ್ಟರೆ ಸಕ್ಕರೆ ಕಾರ್ಖಾನೆ ಆರಂಭ ಮಾಡಬಹುದು ಎಂದು ರೈತರು ಅಭಿಪ್ರಾಯ ವ್ಯಕ್ತಪಡಿಸಿದ ಹಿನ್ನೆಲೆ ಕಾರ್ಖಾನೆ ನೂರಾರು ಕೋಟಿ ರೂ. ನಷ್ಟದಲ್ಲಿದೆ. ಕೇವಲ ಕಾರ್ಖಾನೆಯನ್ನು ಮಾತ್ರ ಖಾಸಗಿಯವರಿಗೆ ನೀಡಲು ತೀರ್ಮಾನ ಮಾಡಲಾಗಿದೆ. ಕಾರ್ಖಾನೆಗೆ ಸಂಬಂಧಿಸಿದ ಇತರ ಯಾವುದೆ ಆಸ್ತಿಯನ್ನ ನೀಡುತ್ತಿಲ್ಲ ಎಂದು ಸಚಿವರು ಮಾಹಿತಿ ನೀಡಿದರು.