ಬೆಂಗಳೂರು :ಒಂದು ಹಂತದಲ್ಲಿ ರಾಜಕೀಯ ಚಟುವಟಿಕೆ ನಡೆಯುತ್ತಿದೆ ಅನ್ನೋದು ಸಹಜ. ಇದಕ್ಕೆ ಇತಿಶ್ರೀ ಹಾಕಲು ಯತ್ನ ಮಾಡಲಾಗ್ತಿದೆ ಎಂದು ಕೇಂದ್ರ ಸಚಿವ ಸದಾನಂದ ಗೌಡ ತಿಳಿಸಿದ್ದಾರೆ.
ನಾಯಕತ್ವ ಬದಲಾವಣೆ ಸಂಬಂಧ ಪ್ರತಿಕ್ರಿಯಿಸಿದ ಅವರು, ಬಿಜೆಪಿ ಅಧ್ಯಕ್ಷರ ಬದಲಾವಣೆ ಇಲ್ಲ. ಈ ಬಗ್ಗೆ ನನಗೆ ಮಾಹಿತಿ ಇಲ್ಲ. ಕೆಲವರಿಂದ ಕೆಲವು ಕಡೆ ಹೇಳಿಕೆ ಕೊಡಲಾಗ್ತಿದೆ. ಯಾರಿಗೋ ಸೈಡಿಗೆ ಹೋಗಿ ಅಂದರೆ, ಅವನಿಗೆ ನಡೆಯಲು ಅಡ್ಡಿ ಮಾಡಿದಂತಲ್ಲ ಎಂದು ಸೂಚ್ಯವಾಗಿ ತಿಳಿಸಿದರು.
ಯೋಗೇಶ್ವರ್ ಮತ್ತು ಯತ್ನಾಳ್ ಹೇಳಿಕೆಗೆ ಪುಲ್ ಸ್ಟಾಪ್ ಹಾಕಬೇಕಾಗಿದೆ. ಅದಕ್ಕೆ ಪಕ್ಷ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಇದೇ ವೇಳೆ ತಿಳಿಸಿದರು. ಖಾಸಗಿಯವರ ಸಹಕಾರದಿಂದ ಲಸಿಕೆ ಪಡೆದು ಎಲ್ಲಾ ವರ್ಗಕ್ಕೆ ಹಾಕಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ನಿರಂತರ ಪ್ರಯತ್ನ ನಡೆಯುತ್ತಿದೆ.