ಬೆಂಗಳೂರು: ಹಳ್ಳಿಗಳಲ್ಲೂ ಕೊರೊನಾ ಸೋಂಕು ಹರಡುತ್ತಿದೆ. ಆನ್ಲೈನ್ ಮೂಲಕ ಶಿಕ್ಷಣ, ಪರೀಕ್ಷೆ ಮಾಡುವುದು ಸರಿಯಲ್ಲ ಎಂದು ವಿಧಾನಸಭೆ ಕಾಂಗ್ರೆಸ್ ಪಕ್ಷದ ಮುಖ್ಯ ಸಚೇತಕ ಹಾಗೂ ಶಾಸಕ ಅಜಯ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.
ಆನ್ಲೈನ್ ಮೂಲಕ ಶಿಕ್ಷಣ, ಪರೀಕ್ಷೆ ನಡೆಸುವುದು ಸರಿಯಲ್ಲ: ಅಜಯ್ ಸಿಂಗ್ - online test
ಕೊರೊನಾ ಸಂದಿಗ್ಧ ಪರಿಸ್ಥಿತಿಯಲ್ಲಿ ರಾಜ್ಯ ಸರ್ಕಾರ ಕೈಗೊಂಡಿರುವ ನಿರ್ಧಾರದ ಬಗ್ಗೆ ಕಟುವಾಗಿ ಟೀಕಿಸಿರುವ ಶಾಸಕ ಅಜಯ್ ಸಿಂಗ್, ಸರ್ಕಾರ ಯಾವುದೇ ಕಾರಣಕ್ಕೂ ಖಾಸಗಿ ಶಿಕ್ಷಣ ಸಂಸ್ಥೆಗಳ ಒತ್ತಡಕ್ಕೆ ಮಣಿಯಬಾರದು ಎಂದಿದ್ದಾರೆ.
ಶಾಸಕ ಅಜಯ್ ಸಿಂಗ್
ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಇಂದು ಸರ್ಕಾರ ಯಾವ ಕಾರಣಕ್ಕೂ ಖಾಸಗಿ ಶಿಕ್ಷಣ ಸಂಸ್ಥೆಗಳ ಒತ್ತಡಕ್ಕೆ ಮಣಿಯಬಾರದು. ಗ್ರಾಮೀಣ ಪ್ರದೇಶದಲ್ಲಿ ಪೋಷಕರ ಬಳಿ ಸ್ಮಾರ್ಟ್ಫೋನ್ ಇದ್ಯಾ? ಮೊಬೈಲ್ ಇರಲ್ಲ, ಲ್ಯಾಪ್ಟಾಪ್ ಎಲ್ಲಿಂದ ತರಬೇಕು? ಇದರ ಬಗ್ಗೆ ಸರ್ಕಾರ ಗಂಭೀರವಾಗಿ ಯೋಚಿಸಬೇಕು. ಮಕ್ಕಳ ಮೇಲೆ ಒತ್ತಡವನ್ನ ಹೇರುವುದು ಬೇಡ ಎಂದರು.
ಎಂಜಿನಿಯರಿಂಗ್, ಪದವಿ ವಿದ್ಯಾರ್ಥಿಗಳಿಗೂ ಆನ್ಲೈನ್ ಪಾಠ ಸರಿಯಲ್ಲ. ಸರ್ಕಾರ ತನ್ನ ನಿರ್ಧಾರ ವಾಪಸ್ ಪಡೆಯಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದರು